ಡಿ.31ರಂದು ತಡರಾತ್ರಿ 2 ಗಂಟೆವರೆಗೂ ಪಾರ್ಟಿಗೆ ಅವಕಾಶ
Recommended Video

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷದಂದು ಪಬ್, ಬಾರ್ ಗಳಲ್ಲಿ ತಡರಾತ್ರಿ 2 ಗಂಟೆಯವರೆಗೂ ಪಾರ್ಟಿ ಮಾಡಲು ಅವಕಾಶ ನೀಡಲಾಗಿದೆ.
ಈ ನಡುವೆ ಹೊಸ ವರ್ಷದ ಭದ್ರತೆಗಾಗಿ ಹಿರಿಯ ಅಧಿಕಾರಿಗೂ ಸೇರಿದಂತೆ 11 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮಹಿಳೆಯರ ಜೊತೆ ಅನುಚಿತ ವರ್ತನೆ, ಕಿಡಿಗೇಡಿ ಕೆಲಸ ಅಪರಾಧ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಇತರೆ ಆಯಕಟ್ಟಿನ ರಸ್ತೆಗಳಲ್ಲಿ ಗುಂಪು-ಗುಂಪಾಗಿ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ. ಈ ರಸ್ತೆಗಳಲ್ಲಿ ವಿಶೇಷ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗುತ್ತದೆ. ಸಿಸಿ ಕ್ಯಾಮರಾ ಅಳವಡಿಸಿ ಎಲ್‌ಇಡಿ ಪರದೆಯಲ್ಲಿ ಚಲನಚಲನ ಗಮನಿಸಲಾಗುತ್ತದೆ.

ಮಹಿಳೆಯರ ರಕ್ಷಣೆಗೆ ವಿಶೇಷ ದಳ ರಚನೆ, ಜನರ ಒಡನಾಟ ನಿಯಂತ್ರಣಕ್ಕೆ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಬ್ಯಾರಿಕೇಡ್ ಮತ್ತು ಗ್ಯಾಂಗ್ ವೇ ಅಳವಡಿಸಿ ಜನರು ಸಾಲಾಗಿ ತೆರಳಲು ವ್ಯವಸ್ಥೆ ಮಾಡಲಾಗುತ್ತದೆ.
ಪಾರ್ಟಿ ನೆಪದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮೇಲೆ ಸಿಸಿಬಿ ಪೊಲೀಸರ ತಂಡಗಳು ನಿಗಾ ಇರಿಸಲಿವೆ. ನಗರಾದ್ಯಂತ 270 ಹೊಯ್ಸಳ ವಾಹನ ಹಾಗೂ 1200 ಚೀತಾ ಬೈಕ್‌ಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದಾರೆ.












Click it and Unblock the Notifications