ಬೆಂಗಳೂರಲ್ಲಿ ಹೊಸ ವರ್ಷದ ಸಂಭ್ರಮ; ಪೊಲೀಸ್ ಭದ್ರತೆ ಹೇಗಿದೆ?
ಬೆಂಗಳೂರು, ಡಿಸೆಂಬರ್ 28; ಉದ್ಯಾನ ನಗರಿ ಬೆಂಗಳೂರು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಿ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಹೊಸ ವರ್ಷದ ಪಾರ್ಟಿ ನಡೆಯುವ ಸ್ಥಳಗಳಲ್ಲಿ ಪೊಲೀಸರು ಭದ್ರತೆ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
ಬೆಂಗಳೂರು ನಗರದ ಜನತೆ ಹೊಸ ವರ್ಷಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಲಾಗಿದೆ.

ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ಮಾಡಲಾಗುತ್ತಿದೆ. ಡಿಸೆಂಬರ್ 22ರಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಸಭೆಯನ್ನು ನೆಡೆಸಲಾಗಿದೆ.
ಬೆಂಗಳೂರು ನಗರದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತರು 2, ಜಂಟಿ ಪೊಲೀಸ್ ಆಯುಕ್ತರು 1, ಡಿಸಿಪಿ 15, ಎಸಿಪಿ 45, ಪೊಲೀಸ್ ಇನ್ಸ್‌ಪೆಕ್ಟರ್ 160, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ 600, ಎಎಸ್‌ಐ 600, ಹೆಡ್ ಕಾನ್ಸ್‌ಟೇಬಲ್ 1800 ಮತ್ತು ಪೊಲೀಸ್ ಕಾನ್ಸ್‌ಟೇಬಲ್ 5,200 ಜನರನ್ನು ನಿಯೋಜನೆ ಮಾಡಲಾಗುತ್ತದೆ.
ಪೊಲೀಸ್ ಭದ್ರತೆಯ ವಿವರಗಳು; ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸಾರ್ವಜನಿಕವಾಗಿ ಆಚರಿಸುವ ಪ್ರಮುಖ ಸ್ಥಳಗಳಾದ ಎಂ. ಜಿ. ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಕಬ್ಬನ್‌ಪಾರ್ಕ್, ಟ್ರಿನಿಟಿ ಸರ್ಕಲ್, ಫೀನಿಕ್ಸ್ ಮಾಲ್, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ, ಪ್ರಮುಖ ಸ್ಟಾರ್ ಹೋಟೆಲ್‌ಗಳು, ಪಬ್‌ಗಳು, ಕ್ಲಬ್‌ಗಳು ಮುಂತಾದ ಸ್ಥಳಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಸೂಕ್ತ ಬಂದೋಬಸ್ತ್ ಪಿಕೇಟಿಂಗ್ ಪಾಯಿಂಟ್‌ಗಳನ್ನು ನೇಮಕ ಮಾಡಲಾಗುತ್ತದೆ.
ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್ ರಸ್ತೆ, ಎಂ. ಜಿ. ರಸ್ತೆ, ಒಪೆರಾ ಜಂಕ್ಷನ್, ರಿಚ್ಮಂಡ್ ರಸ್ತೆ, ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ 4 ಡಿಸಿಪಿ, 10 ಎಸಿಪಿ, 30 ಜನ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು 3000 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮಹಿಳೆಯರ ಸುರಕ್ಷತೆಗಾಗಿ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿರುವ ಮಹಿಳಾ ಸುರಕ್ಷತಾ ಸ್ಥಳಗಳನ್ನು (Women Safety Island) ತೆರೆಯಲಾಗಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಕಿಯೋಸ್ಕ್‌ಗಳನ್ನು (Police Kiosk) ತೆರದಿದ್ದು, ಮಕ್ಕಳು ಕಾಣೆಯಾದಲ್ಲಿ, ಯಾವುದೇ ರೀತಿಯ ಕಳುವಿನ ದೂರುಗಳಿಗೆ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿ ಅವಶ್ಯಕ ಸೇವೆಯನ್ನು ಪಡೆಯಬಹುದಾಗಿದೆ.
ಹೆಚ್ಚು ಜನಸಂದಣಿ ಸೇರುವ ಸ್ಥಳಗಳಲ್ಲಿ ಸೂಕ್ತ ಕಣ್ಣಾವಲು ಏರ್ಪಡಿಸಲು ಸಿಬ್ಬಂದಿಗಳಗೆ ವೀಕ್ಷಣಾ ಗೋಪುರಗಳನ್ನು ನಿರ್ಮಿಸಿದ್ದು, ವೀಕ್ಷಣಾ ಗೋಪುರಗಳಲ್ಲಿ ಕರ್ತವ್ಯಕ್ಕೆ ನೇಮಕ ಮಾಡಲಾಗುವ ಸಿಬ್ಬಂದಿಗಳಗೆ ಬೈನಾಕುಲರ್ ಉಪಕರಣಗಳನ್ನು ಒದಗಿಸಲಾಗುವುದು.
ದಿನಾಂಕ 31/12/2023ರಂದು ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಾರ್ವಜನಿಕರಿಗೆ ನಡಿಗೆಯ ಮೂಲಕ ಏಕ ಮುಖ ಪ್ರವೇಶಕ್ಕೆ ಮಾತ್ರ ಅವಕಾಶ ಮಾಡಿದ್ದು. ಎಂ. ಜಿ. ರಸ್ತೆಗೆ ಪ್ರವೇಶಿಸುವವರಿಗೆ ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಹಾಗೂ ಮೇಯೋ ಹಾಲ್ ಜಂಕ್ಷನ್ ಮೂಲಕ ಎಂ. ಜಿ. ರಸ್ತೆ ಪ್ರವೇಶಿಸಬಹುದಾಗಿದ್ದು ನಂತರ ಬ್ರಿಗೇಡ್ ರಸ್ತೆ ಜಂಕ್ಷನ್ ಮೂಲಕ ಬ್ರಿಗೇಡ್ ರಸ್ತೆಗೆ ಪ್ರವೇಶಿಸಿ ಏಕಮುಖವಾಗಿ ಚಲಿಸಿ ಒಪೇರಾ ಜಂಕ್ಷನ್‌ನಲ್ಲಿ ಹೊರ ಹೋಗಲು ಅವಕಾಶ ಮಾಡಲಾಗಿದೆ.
ಈ ಹಿಂದೆ ವರ್ಷಾಚರಣೆಯನ್ನು ಮುಗಿಸಿಕೊಂಡು ಸಾರ್ವಜನಿಕರು ವಾಪಸ್ ಹೋಗುವ ಸಂದರ್ಭದಲ್ಲಿ ಎಂ. ಜಿ. ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಜನಸಂದಣಿಯಾಗಿ ನೂಕುನುಗ್ಗಲು ಪರಿಸ್ಥಿತಿ ನಿರ್ಮಾಣವಾದ್ದರಿಂದ ಈ ವರ್ಷ ರಾತ್ರಿ 11 ಗಂಟೆಯಿಂದ 2 ಗಂಟೆಯವರೆಗೆ ಎಂ. ಜಿ. ರಸ್ತೆಯ ಮೆಟ್ರೋ ನಿಲ್ದಾಣದ ಮೂಲಕ ಪ್ರಯಾಣಿಕರು ನಿರ್ಗಮಿಸಲು ಅವಕಾಶವಿರುವುದಿಲ್ಲ. ಸಾರ್ವಜನಿಕರು ಎಂ. ಜಿ. ರಸ್ತೆಯಿಂದ ವಾಪಸ್ ಹೋಗುವ ಸಂದರ್ಭದಲ್ಲಿ ಟ್ರಿನಿಟಿ ಸರ್ಕಲ್ ಹಾಗೂ ಕಬ್ಬನ್‌ಪಾರ್ಕ್ ಮೆಟ್ರೋ ನಿಲ್ದಾಣದ ಮೂಲಕ ನಿರ್ಗಮಿಸಬೇಕಿದೆ.
ನಗರದ ಇತರೆ ವಿಭಾಗಗಳ ಪ್ರಮುಖ ಹೊಸ ವರ್ಷ ಆಚರಣೆಯ ಸ್ಥಳಗಳಾದ ಫೀನಿಕ್ಸ್ ಮಾಲ್, ಮಾಲ್ ಆಫ್ ಏಷ್ಯಾ ಹಾಗೂ ನಗರದ ಇತರೆ ಪ್ರಮುಖ ಸ್ಥಳಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ.
ಕೋರಮಂಗಲ, ಇಂದಿರಾನಗರ, ಮಾರತ್‌ಹಳ್ಳಿ, ಹೆಚ್.ಆರ್.ಬಿ.ಆರ್ ಲೇಔಟ್, ಏರ್ ಪೋರ್ಟ್ ರಸ್ತೆ, ವೈಟ್‌ಫೀಲ್ಡ್ ಪ್ರದೇಶಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆಯ ಬಂದೋಬಸ್ತ್ ಕರ್ತವ್ಯಕ್ಕೆ 4 ಡಿಸಿಪಿ, 10 ಎ.ಸಿ.ಪಿ. 25 ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 2500 ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿರುತ್ತದೆ. ಡಿಸೆಂಬರ್ 31ರ ರಾತ್ರಿ ಡ್ರೋನ್ ಕ್ಯಾಮರಾಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ. ನಗರದ ಪ್ರಮುಖ ಸ್ಥಳಗಳನ್ನು ಶ್ವಾನದಳ ಮತ್ತು 10 ಎ.ಎಸ್, ಚೆಕ್ ತಂಡಗಳಿಂದ ತಪಾಸಣೆ ಕೈಗೊಳ್ಳಾಗಿದೆ.
ಕ್ಲಬ್‌ಗಳು, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಹೊಸ ವರ್ಷಾಚರಣೆ ನಿಮಿತ್ತ ಸದಸ್ಯರುಗಳು ಮತ್ತು ಅತಿಥಿಗಳಗೆ ಔತಣ ಕೂಟ - ಇವೆಂಟ್‌ಗಳಗೆ ಅನುಮತಿ ನೀಡುವಾಗ ನಿಗದಿತ ಮಿತಿಯನ್ನು ಮೀರದಂತೆ ಪಾಸ್‌ಗಳನ್ನು ವಿತರಿಸುವಂತೆ ಮಾಲೀಕರಿಗೆ ಸೂಚನೆಗಳನ್ನು ನೀಡಲಾಗಿದೆ. ಹೊಸ ವರ್ಷಾಚರಣೆ ಸಲುವಾಗಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಮದ್ಯವನ್ನು ಪತ್ತೆಮಾಡಿ ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.
ಸುರಕ್ಷತೆ ದೃಷ್ಟಿಯಿಂದ ನಗರದ ಎಲ್ಲಾ ಮೇಲು ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಭಂದಿಸಲಾಗಿದೆ. ಸಾರ್ವಜನಿಕರು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು, ಡ್ರಗ್ಸ್ ಸರಬರಾಜು, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಲಭಿಸಿದ್ದಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಯಾವುದಾದರೂ ವಾರಸುದಾರರು ಇಲ್ಲದ ವಸ್ತುಗಳು ಕಂಡು ಬಂದಲ್ಲಿ ತಕ್ಷಣ ಸ್ಥಳೀಯ ಪೊಲೀಸರಿಗೆ/ ದೂರವಾಣಿ ಸಂಖ್ಯೆ 112 ಕ್ಕೆ ಮಾಹಿತಿ ನೀಡಲು ಕೋರಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications