ಬೆಂಗಳೂರಲ್ಲಿ ಮದ್ಯ ಸೇವನೆ ಮಾಡಿದವರಿಗೆ ಡ್ರಾಪ್ ವ್ಯವಸ್ಥೆ: ಜಿ. ಪರಮೇಶ್ವರ್ ಹೇಳಿದ್ದೇನು
ಬೆಂಗಳೂರು: ಹೊಸ ವರ್ಷ 2026 ಸಂಭ್ರಮಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎನ್ನುವ ಉದ್ದೇಶದಿಂದ ಬೆಂಗಳೂರು ಪೊಲೀಸರು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಸರ್ವಸಿದ್ಧತೆ ಮಾಡಿಕೊಂಡಿದ್ದಾರೆ. ಈ ನಡುವೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ದಿನ ಡ್ರಿಂಕ್ಸ್ ಮಾಡಿದರವರನ್ನು ಮನೆಗೆ ಬಿಡಲಾಗುವುದು ಎಂದು ಹೇಳಿದ್ದರು ಎನ್ನಲಾದ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಟ್ರೋಲ್‌ಗೂ ಸಹ ಕಾರಣವಾಗಿತ್ತು. ಇದೀಗ ಈ ವಿಚಾರವಾಗಿ ಜಿ. ಪರಮೇಶ್ವರ್ ಅವರು ಅಪ್ಡೇಟ್ಸ್ ನೀಡಿದ್ದಾರೆ.
ಬೆಂಗಳೂರಿನ ಎಂ.ಜಿ ರಸ್ತೆ ಹಾಗೂ ಕೋರಮಂಗಲ ಸೇರಿದಂತೆ ವಿವಿಧ ಪ್ರಮುಖ ನಗರಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸೆಂಬರ್ 31ರಂದು ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಡಿಸೆಂಬರ್ 31ರ ತಡರಾತ್ರಿ ಅದ್ಧೂರಿ ಹೊಸ ವರ್ಷದ ಸಂಭ್ರಮಾಚರಣೆ ನಡೆಯುತ್ತದೆ. ಇನ್ನು ಹೊಸ ವರ್ಷ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕೆಲವೊಂದು ಅಹಿತಕರ ಘಟನೆಗಳು ಸಂಭವಿಸಿರುವುದು ಸಹ ಇದೆ. ಹೀಗಾಗಿ, ಈ ಬಾರಿ ಪೊಲೀಸರು ಹೆಚ್ಚಿನ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಮದ್ಯ ಸೇವನೆ ಮಾಡಿದವರನ್ನು ಮನೆಗೆ ಬಿಡುವ ವ್ಯವಸ್ಥೆ ಮಾಡಲಿದ್ದೇವೆ ಎಂದು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ವಿಚಾರವಾಗಿ ಜಿ. ಪರಮೇಶ್ವರ್ ಅವರು ಮಾತನಾಡಿದ್ದು, ಸ್ಪಷ್ಟನೆ ಕೊಟ್ಟಿದ್ದಾರೆ.

ಮದ್ಯ ಸೇವನೆ ಮಾಡಿದವರಿಗೆ ವಿಶೇಷ ವ್ಯವಸ್ಥೆ ಇದೆಯೇ ?
ಇನ್ನು ಬೆಂಗಳೂರಿನಲ್ಲಿ ಮದ್ಯ ಸೇವನೆ ಮಾಡಿರುವವರನ್ನು ಮನೆಗೆ ಬಿಡುವ ವಿಚಾರವಾಗಿ ಜಿ. ಪರಮೇಶ್ವರ್ ಅವರು ರಿಯಾಕ್ಟ್ ಮಾಡಿದ್ದಾರೆ. ಮದ್ಯ ಸೇವನೆ ಮಾಡಿರುವ ಎಲ್ಲರನ್ನೂ ಮನೆಗೆ ಬಿಡುವ ವ್ಯವಸ್ಥೆ ಇರುವುದಿಲ್ಲ. ಯಾರು ತೀರ ಮದ್ಯ ಸೇವನೆ ಮಾಡಿ ನಡೆಯುವುದಕ್ಕೇ ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಇರುತ್ತಾರೆ ಹಾಗೂ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಇರುತ್ತಾರೋ ಅವರಿಗಾಗಿ ರೆಸ್ಟಿಂಗ್ ಪ್ಲೇಸ್ (ವಿಶ್ರಾಂತಿ ಸ್ಥಳಗಳನ್ನು) ನಿಗದಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಈ ರೀತಿ 15 ಪ್ರದೇಶಗಳನ್ನು ಮಾಡಲಾಗಿದ್ದು, ತೀರ ಪ್ರಜ್ಞೆಯೇ ಇಲ್ಲದೆ ಇರುವವರನ್ನು ಆ ಜಾಗದಲ್ಲಿ ಕೂರಿಸಲು (ವಿಶ್ರಾಂತಿ ನೀಡಲಾಗುತ್ತದೆ) ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ಮುಂದುವರಿದು ಅವರಿಗೆ ಪ್ರಜ್ಞೆ ಬಂದ ನಂತರ ಅವರ ವಿಳಾಸವನ್ನು ಪಡೆದುಕೊಂಡು ಅವರ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ. ಮುಖ್ಯವಾಗಿ ಹೆಣ್ಣು ಮಕ್ಕಳು ಆ ಪರಿಸ್ಥಿತಿಯಲ್ಲಿ ಯಾವ ರೀತಿಯಲ್ಲಿ ಇರುತ್ತಾರೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಪ್ರಜ್ಞೆ ಇರುವುದಿಲ್ಲ, ಯಾರು ಏನು ಬೇಕಾದರೂ ಮಾಡುವ ಸಾಧ್ಯತೆ ಇರುತ್ತದೆ. ಆ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಇದರ ಹೊರತಾಗಿ ಬೇರೆ ಉದ್ದೇಶವೇನು ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಕರ್ನಾಟಕದಾದ್ಯಂತ ಭದ್ರತೆ ಹೆಚ್ಚಳ
ಇನ್ನು ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪ್ರಮುಖ ನಗರಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬೆಂಗಳೂರಿಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹೊರಗಿನಿಂದ ಜನ ಬರುತ್ತಾರೆ. ನಮ್ಮವರೂ ಸಹ ಸೇರುತ್ತಾರಾದರೂ ಅವರ ಸಂಖ್ಯೆ ವಿರಳವಾಗಿರುತ್ತದೆ. ವಿವಿಧ ನಗರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಇವರಲ್ಲಿ ಹೆಚ್ಚು ಜನ ಮದ್ಯ ಸೇವನೆ ಮಾಡಿರುತ್ತಾರೆ. ತಳ್ಳಾಟ - ನೂಕುನುಗ್ಗಲು ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಹೆಚ್ಚು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಡ್ರಿಂಕ್ ಅಂಡ್ ಡ್ರೈವ್ ಪರಿಶೀಲನೆ
ಬೆಂಗಳೂರಿನಲ್ಲಿ ಹೊಸ ವರ್ಷದಂದು ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ಪರಿಶೀಲನೆ ಮಾಡುವ ಉದ್ದೇಶದಿಂದ 160 ಜಾಗಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications