ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇಂದು ಮಧ್ಯಾಹ್ನ 12 ರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಂದ ಆದೇಶಿಸಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಯಿರಲಿದೆ.

ಈ ಹಿಂದೆ ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ನೆ ಜಾರಿಗೊಳಿಸಿದ್ದರು.

New Year Section 144 To Be Imposed In Bengaluru From 12 Pm On 31 December Till 6am On 1st Jan

ಆದರೆ ನಗರದಲ್ಲಿ ರೂಪಾಂತರ ಕೊರೊನಾ ಪ್ರಕರಣ ಬೆಳಕಿಗೆ ಬಂದ ಹಿನ್ನಲೆ, ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಹೊಸ ಮಾದರಿಯ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಸುರಕ್ಷತೆ ದೃಷ್ಟಿಯಿಂದ ಇಂದು ಮಧ್ಯಾಹ್ನದಿಂದಲೇ 144 ಸೆಕ್ಷನ್ ಜಾರಿಮಾಡಲಾಗಿದೆ.

ಹೊಸ ವರ್ಷದ ಆಚರಣೆ ವೇಳೆ ಮೋಜು ಮಾಡಲು ನೈಸ್ ರಸ್ತೆಗಳಲ್ಲಿ ಜನ ಸೇರುತ್ತಾರೆ. ಕೆಲವರು ಬೈಕ್ ರೇಸ್, ವ್ಹೀಲಿಂಗ್ ಮಾಡುತ್ತಾರೆ, ಅಂತಹವರ ವಿರುದ್ಧ ಹದ್ದಿನ ಕಣ್ಣಿಡಲಾಗಿದೆ. ನೈಸ್ ರಸ್ತೆಯಲ್ಲೂ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿರುವುದರಿಂದ ನಗರದ ಹೊಸ ಭಾಗಗಳತ್ತ ಜನರು ಹೊರಡುತ್ತಿದ್ದಾರೆ. ಅಲ್ಲಿಯೂ ಸಂಭ್ರಮಾಚರಣೆಗೆ ತಡೆ ಇರಲಿದ್ದು, ನಗರದ ಪ್ರಮುಖ ಮೇಲ್ಸೇತುವೆಗಳು ಹಾಗೂ ಹೊರಭಾಗಗಳನ್ನು ಸಂಪರ್ಕಿಸುವ ಮೇಲ್ಸೇತುವೆಗಳನ್ನು ಗುರುವಾರ ರಾತ್ರಿ 10 ರಿಂದ ಶುಕ್ರವಾರ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

Recommended Video

ಮಕ್ಕಳನ್ನು ಶಾಲೆಗೆ ಕಳುಹಿಸೋದು ಎಷ್ಟರ ಮಟ್ಟಿಗೆ ಸುರಕ್ಷಿತ | Oneindia Kannada

English summary
In the wake of the coronavirus situation in Bengaluru and emergence of the new strain of the virus, the city police have decided to impose Section 144 of CrPC in Karnataka’s capital From 12 Pm On 31 December Till 6am On 1st Jan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X