ಬೆಂಗಳೂರಿನಲ್ಲಿ ಬಿಹಾರ ಮೂಲದ ನವದಂಪತಿ ನೇಣಿಗೆ ಶರಣು
ಬೆಂಗಳೂರು, ಮೇ 2: ನವದಂಪತಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ನಡೆದಿದೆ.
Recommended Video
ದಂಪತಿ ಬಿಹಾರ ಮೂಲದವರಾಗಿದ್ದು, ಮನೆಯ ಮಾಲಿಕರು ವಿದ್ಯುತ್ ಬಿಲ್ ನೀಡಲು ಮನೆಗೆ ಹೋದಾಗ ಘಟನೆ ಬೆಳಕಿಗೆ ಬಮದಿದೆ.
ಬಿಹಾರ ಮೂಲದ ನವವಿವಾಹಿತ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಶ್ರೀರಾಂಪುರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾಗಿರುವ ದಂಪತಿಗಳನ್ನು ರಾಹುಲ್ (30) ಹಾಗೂ ರಾಣಿ (26) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಮನೆ ಮಾಲೀಕರು ವಿದ್ಯುತ್ ಬಿಲ್ ನೀಡಲು ಆಗಮಿಸಿದ್ದ ವೇಳೆ ಮನೆ ಬಾಗಿಲು ತೆರೆದಿತ್ತು.
ಒಳಬಂದು ನೋಡಿದಾಗ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದೆ. ಪತ್ನಿ ರಾಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ ಪತಿ ವಿಷ ಸೇವಿಸಿ ಸಾವನ್ನಪ್ಪಿದ್ದಾನೆ. ಶ್ರೀರಾಂಪುರ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿದಿದೆ.
ಬಿಹಾರ ಮೂಲದ ಇವರು ನಾಲ್ಕು ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದರು. ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ದಂಪತಿಗಳ ಸಾವಿಗೆ ಕಾರಣ ತಿಳಿದುಬಂದಿಲ್ಲ.












Click it and Unblock the Notifications