ಬೆಂಗಳೂರಲ್ಲಿ ಮತ್ತೆರೆಡು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್ 1: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಇನ್ನೆರೆಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಮಂಗಳವಾರ ಬೆಂಗಳೂರಿನ ಯಶವಂತಪುರ, ಮೆಜೆಸ್ಟಿಕ್, ಜಯನಗರ, ಮೈಸೂರು ರಸ್ತೆ, ವಿಧಾನಸೌಧ, ಮಲ್ಲೇಶ್ವರ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಮಳೆ ಮುಂದುವರೆಯಲಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ 30.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 31.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

 Next 48 Hours Heavy Rainfall Chances in Bengaluru

ಧರ್ಮಸ್ಥಳದಲ್ಲಿ ಅತಿ ಹೆಚ್ಚು ಮಳೆಯಾಗಿದೆ.ಬೀದರ್, ತುಮಕೂರು, ಉಚ್ಚಂಗಿದುರ್ಗ, ಹೊಳಲ್ಕೆರೆ, ಬೆಳ್ತಂಗಡಿ, ಯಲ್ಲಾಪುರ, ಬೆಳಗಾವಿ, ಕೊಟ್ಟೂರು, ಸುಬ್ರಹ್ಮಣ್ಯ, ಮೊಳಕಾಕ್ಮೂರು, ಕೋಟಾ, ನಿಪ್ಪಾಣಿ, ಹುಕ್ಕೇರಿ, ಕೂಡ್ಲಿಗಿಯಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+