ಮಾನ್ಸೂನ್ ಚುರುಕು: ಬೆಂಗಳೂರಲ್ಲಿ ಎರಡು ದಿನ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 8: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಬೆಂಗಳೂರಿನಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರಾದ್ಯಂತ ಶುಕ್ರವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು ತುಂತುರು ಮಳೆ ಆರಂಭವಾಗಿದೆ.
ಇನ್ನು 48 ಗಂಟೆಗಳ ವರೆಗೂ ಇದೇ ರೀತಿ ವಾತಾವರಣ ಮುಂದುವರೆಯಲಿದೆ, ಮಳೆ, ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 29ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ 29.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹೊನ್ನಾವರ, ಹುಕ್ಕೇರಿ, ಶಿರಾಲಿ, ವಿಜಯಪುರ, ಸೇಡಂ, ಕಮಲಪುರ್, ಬಾಗಲಕೋಟೆ, ಕಲಬುರಗಿ, ಕುಂದಾಪುರ, ಉಡುಪಿ, ಗೇರುಸೊಪ್ಪ, ಪುತ್ತೂರು, ಲೋಕಾಪುರ, ಕೋಟಾ, ಮಸ್ಕಿ ಇನ್ನು ಹಲವೆಡೆ ಮಳೆಯಾಗಿದೆ.

ಕರಾವಳಿ ಭಾಗದಲ್ಲಿ 35-40 ಕೆಎಂಪಿಎಚ್ ವೇಗದಲ್ಲಿ ಬೀಸುತ್ತಿದ್ದ ಗಾಳಿಯು 50 ಕೆಎಂಪಿಎಚ್ ವೇಗದಲ್ಲಿ ಬೀಸುತ್ತಿದೆ. ಸಮುದ್ರ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications