ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್‌ಐಎ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮಹತ್ವದ ಪ್ರಗತಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಮೂರು ರಾಜ್ಯಗಳ 18 ಸ್ಥಳಗಳಲ್ಲಿ ವ್ಯಾಪಕ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರ ಮುಝಮ್ಮಿಲ್ ಶರೀಫ್‌ನನ್ನು ಎನ್ನುವಾತನನ್ನು ಬಂಧಿಸಿದೆ.
ಎನ್‌ಐಎ ತಂಡಗಳು ಕರ್ನಾಟಕದಲ್ಲಿ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಶರೀಫ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿ ಸಹ ಸಂಚುಕೋರ ಎಂದು ಕಸ್ಟಡಿಗೆ ನೀಡಲಾಗಿದೆ ಎಂದು ಎನ್‌ಐಎ ಗುರುವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 1 ರಂದು, ಬೆಂಗಳೂರಿನ ಬ್ರೂಕ್‌ಫೀಲ್ಡ್, ಐಟಿಪಿಎಲ್ ರಸ್ತೆಯಲ್ಲಿರುವ ಜನನಿಬಿಡ ರಾಮೇಶ್ವರಂ ಕೆಫೆಯಲ್ಲಿ ಹ್ಯಾಂಡ್‌ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ ಸ್ಫೋಟಗೊಂಡಿದ್ದರಿಂದ ನೌಕರರು ಮತ್ತು ಗ್ರಾಹಕರು ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಎನ್‌ಐಎ ಬಿರುಸಿನ ತನಿಖೆ
ಎನ್‌ಐಎ ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡಿತು ಮತ್ತು ಸ್ಫೋಟವನ್ನು ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್ ಎಂದು ಗುರುತಿಸಿತ್ತು. ಮತ್ತೊಬ್ಬ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂಬಾತನನ್ನೂ ಗುರುತಿಸಲಾಗಿದ್ದು, ಇತರ ಪ್ರಕರಣಗಳಲ್ಲಿ ಏಜೆನ್ಸಿಗೆ ಬೇಕಾಗಿದ್ದಾನೆ. ಏಜೆನ್ಸಿ ಪ್ರಕಾರ, ಇಬ್ಬರೂ ವ್ಯಕ್ತಿಗಳು ಪ್ರಸ್ತುತ ಪರಾರಿಯಾಗಿದ್ದಾರೆ.
ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಶರೀಫ್ ಬೆಂಬಲವನ್ನು ನೀಡಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ವಸತಿ ಆವರಣ ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಲು ಕೇಂದ್ರೀಯ ಭಯೋತ್ಪಾದನಾ ನಿಗ್ರಹ ಸಂಸ್ಥೆ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.












Click it and Unblock the Notifications