ಚರ್ಚ್‌ಸ್ಟ್ರೀಟ್ ಬಾಂಬ್ ಸ್ಫೋಟದ ತನಿಖೆ ಎನ್‌ಐಎ ಹೆಗಲಿಗೆ?

ಬೆಂಗಳೂರು, ಮೇ 19 : 2014ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್‌ ಸ್ಫೋಟದ ತನಿಖೆಯನ್ನು ಎನ್‌ಐಎ ವಹಿಸಿಕೊಳ್ಳುವ ಸಾಧ್ಯತೆ ಇದೆ. ಈ ಬಾಂಬ್‌ ಸ್ಫೋಟದಲ್ಲಿ ಮಹಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು.

ಕರ್ನಾಟಕ ಪೊಲೀಸರ ವಿಶೇಷ ತಂಡ ಈ ಬಾಂಬ್ ಸ್ಫೋಟದ ತನಿಖೆಯನ್ನು ನಡೆಸುತ್ತಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ತನಿಖೆಯನ್ನು ವಹಿಸುವ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. [ಚರ್ಚ್ ಸ್ಟ್ರೀಟ್ ಸ್ಫೋಟ ತನಿಖೆಗೆ ಎಳ್ಳು-ನೀರು!]

church street bomb blast

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಕೋಕೋನಟ್ ಗ್ರೋವ್ ಹೋಟೆಲ್‌ ಬಳಿ ಡಿ.28ರ ಭಾನುವಾರ ಸಂಜೆ 8.30ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿತ್ತು. ಹೊಸ ವರ್ಷದ ಸಂಭ್ರಮಾಚರಣೆ ಗುಂಗಿನಲ್ಲಿದ್ದ ಉದ್ಯಾನಗರಿಯ ಜನರು ಬಾಂಬ್ ಸ್ಫೋಟದ ಸುದ್ದಿ ಕೇಳಿ ಆತಂಕಗೊಂಡಿದ್ದರು. [ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಪೋಟ]

ಬಾಂಬ್ ಸ್ಫೋಟದ ತನಿಖೆ ಆರಂಭಿಸಿದ ಕರ್ನಾಟಕ ಪೊಲೀಸರ ವಿಶೇಷ ತಂಡ ಅಕ್ಕಪಕ್ಕದ ರಾಜ್ಯಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ ಮಾಡಿತ್ತು. ಆದರೆ, ಇದುವರೆಗೂ ಬಾಂಬ್ ಸ್ಫೋಟ ನಡೆಸಿದವರು ಯಾರು? ಎಂಬ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.

ಬಿಹಾರದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ತನಿಖೆಯ ಆರೋಪಿಯನ್ನು ಬೆಂಗಳೂರಿಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದರೂ, ಆದರೂ ಚರ್ಚ್ ಸ್ಟ್ರೀಟ್ ಸ್ಫೋಟದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸದ್ಯ, ಕೇಂದ್ರ ಸರ್ಕಾರ ಈ ತನಿಖೆಯನ್ನು ಎನ್‌ಐಗೆ ವಹಿಸಲು ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+