ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಎಫ್‌ಐ ಕಚೇರಿ ಮೇಲೆ ದಾಳಿ ಧರ್ಮಾಧರಿತವಲ್ಲ- ಗೃಹ ಸಚಿವ ಆರಗ ಜ್ಞಾನೇಂದ್ರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22: ದೇಶದಾದ್ಯಂತ ಏಕಕಾಲದಲ್ಲಿ ಪಿಎಫ್ಐ ಸಂಘಟನೆಯ ಮೇಲೆ ಏಕಕಾಲದಲ್ಲಿ ಎನ್ಐಎ ದಾಳಿಯನ್ನು ಮಾಡಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ , ಮೈಸೂರು, ಮಂಗಳೂರು ಸೇರಿದಂತೆ ವಿವಿಧೆಡೆ ದಾಳಿಯಾಗಿದೆ. ಎನ್ಐಎ ದಾಳಿ ಧರ್ಮಾಧರಿತವಲ್ಲ ಅಪರಾಧ ಆಧರಿತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

"ಪೊಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ, ಅಲ್ಲ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಇಬ್ಬರು ಎನ್‌ಐಎ ವಶಕ್ಕೆ ದಾವಣಗೆರೆಯಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಇಬ್ಬರು ಎನ್‌ಐಎ ವಶಕ್ಕೆ

ಸಮಾಜದಲ್ಲಿ, ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ, ಎಲ್ಲರೂ ಸಹಕರಿಸಬೇಕು, ಎಂದು ಗೃಹಸಚಿವರು ಹೇಳಿದರು.

ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದ ಸಚಿವರು, ಖಚಿತ ಮಾಹಿತಿ ಮೇರೆಗೆ NIA ಸಿಬ್ಬಂದಿಗಳು, ಹಲವು ಕಡೆ ಶೋಧ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

NIA raids PFI offices across India : Home minister Araga Jnanendra reaction

ಶಿವಮೊಗ್ಗದಲ್ಲಿ ಬಂಧಿತರಾಗದವರು ಭಯೋತ್ಪಾದಕರ ಸಂಪರ್ಕದಲ್ಲಿ ಶಿವಮೊಗ್ಗ ಪೊಲೀಸರು, ಇಬ್ಬರು ವ್ಯಕ್ತಿಗಳು, ಭಯೋತ್ಪಾದಕ ಸಂಘಟನೆ ಜತೆ, ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ, ತನಿಖೆ ನಡೆಸಲಾಗುತ್ತಿದ್ದು ಪೊಲೀಸರುಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ

ತನಿಖೆಯನ್ನು ಚುರುಕಿನಿಂದ ನಡೆಸಿರುವ ಶಿವಮೊಗ್ಗ, ಪೊಲೀಸರ, ಕಾರ್ಯ ಕ್ಷಮತೆಯ ಬಗ್ಗೆ, ಅಭಿನಂದಿಸುತ್ತೇನೆ, ಎಂದೂ ಸಚಿವರು ಹೇಳಿದರು.

ಪೇಸಿಎಂ ಅಭಿಯಾನಕ್ಕೆ ಟೀಕೆ

ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪೇಸಿಎಮ್ ಅಭಿಯಾನದ ಬಗ್ಗೆ, ಕಟುವಾಗಿ ಪ್ರತಿಕ್ರಿಯಿಸಿದ ಸಚಿವರು, ಜನರು ಪಕ್ಷದಿಂದ ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ಗೃಹ ಸಚಿವರು ಹರಿಹಾಯ್ದರು.

ಕಾಂಗ್ರೆಸ್ ಪಕ್ಷದ ನಾಯಕರೂ ಮಾಜಿ ವಿಧಾನ ಸಭಾ ಸ್ಪೀಕರ್ ಸಹ ಆಗಿದ್ದ, ಕಾಂಗ್ರೆಸ್ ನಾಯಕರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ಹೇಳಿದ್ದು, ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದರು.

English summary
Simultaneous NIA raids on PFI organizations across the country. In Karnataka, Bangalore, Shimoga, Mysore, Mangalore and other places have been attacked. Home Minister Araga Gyanendra said that the NIA attack was not based on religion but based on crime. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X