• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ ಎನ್‌ಐಎ ಶಾಶ್ವತ ಕಚೇರಿ: ಕೇಂದ್ರದಿಂದ ಗ್ರೀನ್ ಸಿಗ್ನಲ್

|

ಬೆಂಗಳೂರು, ಸೆಪ್ಟೆಂಬರ್ 28: ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶಾಶ್ವತ ಕಚೇರಿಯನ್ನು ಆರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ನೂತನ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

ರಾಷ್ಟ್ರೀಯ ತನಿಖಾ ಸಂಸ್ಥೆಯ ಖಾಯಂ ಕಚೇರಿಯನ್ನು ಅನ್ನು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

 ಡಿ.ಜೆ ಹಳ್ಳಿ ಗಲಭೆ ಪ್ರಕರಣ: NIAಯಿಂದ 30 ಕಡೆ ದಾಳಿ, ಪ್ರಮುಖ ಆರೋಪಿ ಬಂಧನ ಡಿ.ಜೆ ಹಳ್ಳಿ ಗಲಭೆ ಪ್ರಕರಣ: NIAಯಿಂದ 30 ಕಡೆ ದಾಳಿ, ಪ್ರಮುಖ ಆರೋಪಿ ಬಂಧನ

ಭಾನುವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸೂರ್ಯ, ಭಾರತೀಯ ಜನತಾ ಯುವ ಮೋರ್ಚಾದ (ಬಿಜೆಪಿಯ ಯುವ ವಿಭಾಗ) ರಾಷ್ಟ್ರೀಯ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಬೆಂಗಳೂರು ಮತ್ತು ಕರ್ನಾಟಕದಲ್ಲಿ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ಹೆಚ್ಚಳವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರಿಂದ ಈ ತ್ವರಿತ ಕ್ರಮ ಬಂದಿದೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಭೇಟಿ ಮಾಡಿ ಈ ಕುರಿತು ಚರ್ಚಿಸಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸೂಕ್ತವಾಗಿ ಸ್ಪಂದಿಸಿರುವ ಸಚಿವರು ಬೆಂಗಳೂರಿನಲ್ಲಿ ಎನ್‌ಐ ಕಚೇರಿ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರನ್ನು ಮತ್ತು ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು, ಎನ್‌ಐಎ ಶಾಶ್ವತ ಕಚೇರಿ ಅಗತ್ಯ ಇದೆ ಎಂಬುದನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಇದೇ ವೇಳೆ ಬೆಂಗಳೂರಿನ ಗೋಂವಿದರಾಜ ನಗರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಗಿದ್ದು ಈಡೇರಿಸುವ ಭರವಸೆ ಸಿಕ್ಕಿದೆ ಎಂದು ತೇಜಸ್ವಿ ತಿಳಿಸಿದ್ದಾರೆ.

English summary
Union Home Minister Amit Shah has promised that a Permanent Station House of the National Investigation Agency will soon be set up in Bengaluru, said Bengaluru South Member of Parliament Tejasvi Surya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X