• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಲ್ಲಿ ಜೂನ್ 21ರ ನಂತರವೂ ವಾರಾಂತ್ಯ ಕರ್ಫ್ಯೂ ಮುಂದುವರಿಕೆ

|
Google Oneindia Kannada News

ಬೆಂಗಳೂರು, ಜೂನ್ 19: ಬೆಂಗಳೂರಿನಲ್ಲಿ ಜೂನ್ 21ರ ನಂತರವೂ ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಮುಂದುವರೆಯಲಿದೆ ಎಂದು ಬಿಬಿಎಂಪಿ ಹೇಳಿದೆ.

ಜೂನ್.21ರಿಂದ ಅನ್'ಲಾಕ್ 2.0 ಆರಂಭವಾಗಲಿದ್ದು, ಈ ಹಂತದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಶೇ.50ರಷ್ಟು ಪ್ರಯಾಣಿಕರೊಂದಿಗೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ನಡುವಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಬಿಬಿಎಂಪಿ ತಿಳಿಸಿದೆ.

 ನಿಯಮ ಉಲ್ಲಂಘನೆ: ಬೆಂಗಳೂರಲ್ಲಿ 3 ದಿನದಲ್ಲಿ ಸಂಗ್ರಹವಾದ ದಂಡವೆಷ್ಟು? ನಿಯಮ ಉಲ್ಲಂಘನೆ: ಬೆಂಗಳೂರಲ್ಲಿ 3 ದಿನದಲ್ಲಿ ಸಂಗ್ರಹವಾದ ದಂಡವೆಷ್ಟು?

ಕೊರೊನಾ 3ನೇ ಅಲೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎರಡನೇ ಅಲೆ ಸಂದರ್ಭದಲ್ಲಿ ಮಾಡಲಾದ ವಾರ್ ರೂಮ್ ಗಳು, ಆಸ್ಪತ್ರೆ, ಆಕ್ಸಿಜನ್, ಟ್ರಯಾಜಿಂಗ್ ಕೇಂದ್ರ, ಕೋವಿಡ್ ಆರೈಕೆ ಕೇಂದ್ರ. ವೈದ್ಯಕೀಯ ಸಿಬ್ಬಂದಿ ಸೇರಿದಂತೆ ವಿವಿಧ ವ್ಯವಸ್ಥೆಗಳು ಮುಂದುವರೆಯಲಿವೆ. ಮೂರನೇ ಅಲೆ ಸಲುವಾಗಿ ಕೆಲವು ಆಸ್ಪತ್ರೆಗಳಲ್ಲಿ ಮತ್ತಷ್ಟು ಐಸಿಯು ಹಾಸಿಗೆಗಳನ್ನು ನಿರ್ಮಿಸುವ ಸಿದ್ಧತೆಗಳು ನಡೆಯುತ್ತಿವೆ. ಕೆಲವು ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದಲ್ಲಿ ಐಸಿಯು ಹಾಸಿಗೆಗಳ ವ್ಯವಸ್ಥೆಗೆ ಮಾಡುವ ಕುರಿತು ಮಾತುಕತೆಗಳೂ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಮೊದಲ ಹಂತದಲ್ಲಿ ಕೈಗಾರಿಕೆಗಳು ಮತ್ತು ಉತ್ಪಾದನಾ ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಇದೀಗ ಜೂ.21ರಂದು ಎರಡನೇ ಹಂತದ ಲಾಕ್ಡೌನ್ ಸಡಿಲಿಕೆಯಾಗಲಿದ್ದು, ವಾಣಿಜ್ಯ ಉದ್ಯಮಗಳು ಮತ್ತು ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಸಿಗಲಿದೆ. ಕ್ರಮೇಣ ಪರಿಸ್ಥಿತಿ ಆಧರಿಸಿ ಉಳಿದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜನರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ, ಎಲ್ಲೆಂದರಲ್ಲಿ ಬೇಕಾಬಿಟ್ಟಿ ಓಡಾಡಿದರೆ ನಿರೀಕ್ಷೆಗಿಂತ ಮುಂಚಿತವಾಗಿಯೇ ಮೂರನೇ ಅಲೆ ಬರುವ ಸಾಧ್ಯತೆಗಳಿವೆ. ಆದ್ದರಿಂದ ಎಚ್ಚರಿಕೆ ಹಾಗೂ ಜವಾಬ್ದಾರಿಯನ್ನು ಅರಿತು ಸಾರ್ವಜನಿಕರು ನಡೆದುಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು.

ಶನಿವಾರ ಮತ್ತು ಭಾನುವಾರ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಲಾಗಿದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಜನರು ಯಾರು ಅನಗತ್ಯವಾಗಿ ಓಡಾಡಬಾರದು. ಈ ಹಿಂದೆ ಇದ್ದಂತೆಯೇ ಈ ಕರ್ಫ್ಯೂ ಕೂಡ ಇರಲಿದೆ. ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ ಮುಂದುವರೆಯಲಿದೆ. ಮೂರನೇ ಅಲೆ ಯಾವಾಗ ಬರುತ್ತದೆಯೆಂದು ಈಗಾಗಲೇ ತಜ್ಞರು ಮುನ್ಸೂಚನೆ ಕೊಟ್ಟಿದ್ದಾರೆ.

   ವಿಶ್ವನಾಥ್ ನಾಲಿಗೆ ಸರಿ ಇಲ್ಲ ಎಂದ Renukacharya | Oneindia Kannada
   English summary
   In the next phase of unlock from June 21, it is likely that public transport will be allowed to operate with 50 per cent seating capacity. Also, night curfew will continue.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X