Breaking; ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ

ಬೆಂಗಳೂರು, ಆಗಸ್ಟ್ 17; ಕೋವಿಡ್ ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಬೆಂಗಳೂರು ಪೊಲೀಸರು ರಾತ್ರಿ ಕರ್ಫ್ಯೂವನ್ನು ಆಗಸ್ಟ್ 30ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Recommended Video

      Night Curfew ಜಾರಿ ಮಾಡಿದ ರಾಜ್ಯ ಸರ್ಕಾರ | Oneindia Kannada

      ಮಂಗಳವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

      ಬೆಂಗಳೂರು ನಗರದಲ್ಲಿ ಆಗಸ್ಟ್ 16ರ ಬೆಳಗ್ಗೆ 6 ಗಂಟೆಯ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿತ್ತು. ಇಂದು ರಾತ್ರಿ ಕರ್ಫ್ಯೂವನ್ನು ಆಗಸ್ಟ್ 30ರ ತನಕ ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

      Night Curfew Extended In Bengaluru City Till August 30

      ನಗರದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾತ್ರಿ 9 ಗಂಟೆಯ ಬಳಿಕ ಅಂಗಡಿ, ಶಾಪ್‌ಗಳನ್ನು ತೆರೆದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

      ರಾತ್ರಿ ಕರ್ಫ್ಯೂ ಜಾರಿಯಲ್ಲಿರುವ ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಬಸ್, ರೈಲು, ವಿಮಾನದ ಪ್ರಯಾಣಿಕರು ಸಂಚಾರ ನಡೆಸಲು ಅವಕಾಶವನ್ನು ನೀಡಲಾಗಿದೆ.

      ಬೆಂಗಳೂರು ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಮಾತನಾಡಿದ್ದು, "ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿಗೆ ತರುವ ಪರಿಸ್ಥಿತಿ ನಗರದಲ್ಲಿ ಸದ್ಯಕ್ಕೆ ಇಲ್ಲ. ಪ್ರಕರಣಗಳು ಎಷ್ಟು ಜಾಸ್ತಿ ಆಗುತ್ತವೆಯೋ ಅದರ ಆಧಾರದಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.

      ಬೆಂಗಳೂರು ನಗರದಲ್ಲಿ ಕಳೆದ 50 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರತಿದಿನ 300 ರಿಂದ 400 ನಡುವೆ ಇದೆ. ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ ನಗರದಲ್ಲಿ 304 ಹೊಸ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣ 7913.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+