ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಇಂದಿನಿಂದಲೇ ಕರ್ಫ್ಯೂ ಸಮಯ ಬದಲಾವಣೆ: ಉಲ್ಲಂಘಿಸಿದರೆ ಕ್ರಮ

|
Google Oneindia Kannada News

ಬೆಂಗಳೂರು, ಜೂನ್ 29: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮುಂದಿನ ದಿನದಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್‌ ಮಾಡಬಹುದು ಎಂಬ ಚರ್ಚೆ ನಡೆಯುತ್ತಿದೆ.

Recommended Video

Congress Cycle Rally against Fuel hike : ಸೈಕಲ್ ಏರಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು|Oneindia Kannada

ಜುಲೈ 4ರಿಂದ ರಾಜ್ಯದಲ್ಲಿ ಬಹಳ ಬದಲಾವಣೆಗಳು ಆಗಲಿವೆ, ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಲಿದೆ ಎಂದು ಆರ್ ಅಶೋಕ್ ಹೇಳಿದ್ದರು.

'ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆ ಇಲ್ಲ': ಟಾಸ್ಕ್ ಪೋರ್ಸ್'ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆ ಇಲ್ಲ': ಟಾಸ್ಕ್ ಪೋರ್ಸ್

ಇದೀಗ, ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ಆದೇಶದಂತೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ನಿಮಯ ಇಂದು ರಾತ್ರಿಯಿಂದಲೇ ಅನ್ವಯವಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಾತ್ರಿ 8 ಗಂಟೆಯ ನಂತರ ಅನಗತ್ಯ ಓಡಾಟ ಕಂಡು ಬಂದಲ್ಲಿ ಬೆಂಗಳೂರು ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

Night Curfew starts between 8pm to 5am In Bengaluru

ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯ ಇನ್ನು ಕೆಲವು ಜಿಲ್ಲೆಗಳಲ್ಲಿ ಕರ್ಫ್ಯೂ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಜೂನ್ 30 ರಿಂದ ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.

English summary
Night Curfew starts between 8pm-5am from June29th at bengaluru. City police will take action on those caught without a valid reason.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X