ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟೋಲ್ ದರ ಹೆಚ್ಚಳದ ವಿರುದ್ಧ ನಿಖಿಲ್ ಗೌಡ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಮೇ 19 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರ ಟೋಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಮುಂದುವರೆದಿದೆ. ಸೋಮವಾರ ಟೋಲ್ ದರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮತ್ತು ಇತರರನ್ನು ಪೊಲೀಸರು ವಶಕ್ಕೆ ಪಡೆದರು.

ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಸೋಮವಾರ ದೇವನಹಳ್ಳಿ ಬಳಿಯ ನವಯುಗ ಟೋಲ್ ಬೂತ್ ಮುಂದೆ ಟೋಲ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. [ಟೋಲ್ ದರ 20 ರೂ ಕಡಿಮೆ ಆಗಬಹುದು]

ನಿಖಿಲ್ ಗೌಡ ನೇತೃತ್ವದಲ್ಲಿ ರಸ್ತೆ ತಡೆದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ವಿಮಾನ ನಿಲ್ದಾಣಕ್ಕೆ ಸಾಗುವ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಆದ್ದರಿಂದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಬಸ್‌, ವಿಮಾನ ನಿಲ್ದಾಣದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಸಂಚರಿಸುತ್ತವೆ. ಟೋಲ್ ದರ ಏರಿಕೆಯಿಂದ ವಾಹನ ಸವಾರರು ಮತ್ತು ಟೋಲ್ ಬೂತ್ ಸುತ್ತಮುತ್ತಲಿನ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಆದ್ದರಿಂದ ದರ ಹೆಚ್ಚಳವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಚಿತ್ರಗಳಲ್ಲಿ ನೋಡಿ ಪ್ರತಿಭಟನೆ

ಟೋಲ್ ಹೆಚ್ಚಳದ ವಿರುದ್ಧ ಪ್ರತಿಭಟನೆ

ಟೋಲ್ ಹೆಚ್ಚಳದ ವಿರುದ್ಧ ಪ್ರತಿಭಟನೆ

ಜೆಡಿಎಸ್ ಯುವ ಘಟಕ ದೇವನಹಳ್ಳಿಯ ಬಳಿಯ ನವಯುಗ ಟೋಲ್ ಬೂತ್ ಮುಂದೆ ಸೋಮವಾರ ಟೋಲ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿತು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ನಿರತರ ಬಂಧನ

ಪ್ರತಿಭಟನಾ ನಿರತರ ಬಂಧನ

ಪ್ರತಿಭಟನೆಯಿಂದ ವಿಮಾಣ ನಿಲ್ದಾಣದ ರಸ್ತೆಯಲ್ಲಿನ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ ನಿಖಿಲ್‌ಗೌಡ ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಟೋಲ್ ದರ ಹೆಚ್ಚಳ ಹಿಂಪಡೆಯಿರಿ

ಟೋಲ್ ದರ ಹೆಚ್ಚಳ ಹಿಂಪಡೆಯಿರಿ

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಬಸ್‌, ವಿಮಾನ ನಿಲ್ದಾಣದ ಟ್ಯಾಕ್ಸಿ ಮುಂತಾದ ವಾಹನಗಳು ಸಂಚರಿಸುತ್ತವೆ. ಟೋಲ್ ದರ ಹೆಚ್ಚಳದಿಂದ ಟೋಲ್ ಬೂತ್ ಸುತ್ತಮುತ್ತಲಿನ ಸಾಮಾನ್ಯ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಆದ್ದರಿಂದ ಟೋಲ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಸರ್ಕಾರ ಕೂಡಲೇ ಟೋಲ್ ದರ ಏರಿಕೆಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ತಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಟೋಲ್ ದರ ಎಷ್ಟು ಹೆಚ್ಚಾಗಿದೆ?

ಟೋಲ್ ದರ ಎಷ್ಟು ಹೆಚ್ಚಾಗಿದೆ?

ಸದ್ಯ ಹೆಚ್ಚಳವಾಗಿರುವ ಟೋಲ್ ದರದಂತೆ 22 ಕಿ.ಮೀ ಮಾರ್ಗದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಒಂದು ಬಾರಿ ಪ್ರಯಾಣಿಸಲು ಕಾರು, ಜೀಪು, ಹಗುರ ವಾಹನಗಳು 75 ರೂ., ಲಘು ವಾಣಿಜ್ಯ ವಾಹನ ಹಾಗೂ ಮಿನಿ ಬಸ್ಸುಗಳು 120 ರೂ., ಬಸ್‌, ಲಾರಿ ಹಾಗೂ ಎರಡು ಆ್ಯಕ್ಸಲ್‌ ವಾಹನಗಳು 235, ಮೂರರಿಂದ ಆರು ಆ್ಯಕ್ಸಲ್‌ ವಾಹನಗಳು 380 ರೂ. ಹಾಗೂ ಜೆಸಿಬಿಯಂತಹ ಬೃಹತ್ ಗಾತ್ರದ ವಾಹನಗಳು 470 ರೂ. ಶುಲ್ಕ ಪಾವತಿ ಮಾಡಬೇಕಾಗಿದೆ.

ರಾಜಕಾರಣಕ್ಕೆ ಬರಲು ತಯಾರಿ

ರಾಜಕಾರಣಕ್ಕೆ ಬರಲು ತಯಾರಿ

ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಅವರು ರಾಜಕೀಯಕ್ಕೆ ಬರಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಭಾಕರ ರೆಡ್ಡಿ ಪರವಾಗಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಕೈಗೊಂಡಿದ್ದರು. [ರಾಮನಗರದಲ್ಲಿ ನಿಖಿಲ್ ಗೌಡ ಪ್ರಚಾರ]

English summary
Nikhil Gowda, grandson of JD(S) supremo and former PM HD Deve Gowda, is all set to enter active politics. On Monday he lead protest against toll hike in the Kempegowda International Airport road. Nikhil, son of former Chief Minister H D Kumaraswamy, recently campaigned for his father in Chikballapur Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X