ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯ ಗೆಲ್ಲಿಸಿಯೇ ಸಿದ್ಧ: ಡಿಕೆ.ಶಿವಕುಮಾರ್
ಬೆಂಗಳೂರು, ಮಾರ್ಚ್ 21: ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವಂತೆ ಹೈಕಮಾಂಡ್ ಆದೇಶ ಮಾಡಿದೆ ಹಾಗಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಯೇ ಸಿದ್ಧ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹೊಂದಾಣಿಕೆ ಮಾತೇ ಇಲ್ಲ, ಕಾಂಗ್ರೆಸ್ ಸುಮಲತಾ ಅವರಿಗೆ ಬೆಂಬಲ ನೀಡುತ್ತಿದೆ ಎಂಬ ಮಾತು ಕೇವಲ ಊಹಾಪೋಹ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷವು ಮೈತ್ರಿ ಅಭ್ಯರ್ಥಿ ನಿಖಿಲ್ ಪರವಾಗಿದೆ ಎಂದರು.
ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಮತ್ತು ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡೂ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳೇ ಕಣಕ್ಕೆ ಇಳಿದಿದ್ದಾರೆ.

ಕುಮಾರಸ್ವಾಮಿ ಅವರು ರಕ್ಷಣಾತ್ಮಕ ರಾಜಕೀಯವನ್ನು ಎಂದೂ ಮಾಡಿಲ್ಲ, ಅವರೂ ಅಷ್ಟೆ ಅವರ ತಂದೆಯವರೂ ಅಷ್ಟೆ ಹೋರಾಟದ ರಾಜಕಾರಣವನ್ನೇ ಮಾಡಿದ್ದಾರೆ, ಮಂಡ್ಯದಲ್ಲೂ ಅಷ್ಟೆ ಹೋರಾಟದ ರಾಜಕಾರಣ ಮಾಡುತ್ತಿದ್ದಾರೆ ಮತ್ತು ಗೆಲ್ಲುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಮಧುಗಿರಿಯಲ್ಲಿ ಜೆಡಿಎಸ್ ಶಾಸಕ ಕೈಕೊಟ್ಟಾಗ ತಮ್ಮ ಪತ್ನಿಯನ್ನೇ ಕಣಕ್ಕೆ ಇಳಿಸಿ ಗೆಲ್ಲಿಸಿಕೊಂಡರು, ಅವರೆಂದೂ ರಕ್ಷಣಾತ್ಮಕ ರಾಜಕೀಯ ಮಾಡಿಲ್ಲ ಎಂದರು.
ಶಿವಮೊಗ್ಗ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವಂತೆ ಹೈಕಮಾಂಡ್ ನನಗೆ ಜವಾಬ್ದಾರಿ ವಹಿಸಿದೆ ಅದಂರತೆ ಆ ಎರಡೂ ಕ್ಷೇತ್ರಗಳಲ್ಲಿನ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಅವರು ಹೇಳಿದರು.












Click it and Unblock the Notifications