ಸರಳ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಪುತ್ರಿ ಮದುವೆ, ರಾಜಕೀಯ ನಾಯಕರಿಗಿಲ್ಲ ಆಹ್ವಾನ!

ಬೆಂಗಳೂರು, ಜೂನ್. 09: ಸರಳ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಂಗಮಾಯಿ ಬುಧವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ವಿವಾಹವಾಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮದುವೆಯಲ್ಲಿ ಆಪ್ತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು. ಯಾವುದೇ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿಲ್ಲ.

ಗುಜರಾತ್ ಮೂಲದ ಪ್ರತೀಕ್ ಅವರೊಂದಿಗೆ ಪರಕಾಲ ವಂಗಮಾಯಿ ಅವರ ವಿವಾಹವು ಬ್ರಾಹ್ಮಣ ಸಂಪ್ರದಾಯದಂತೆ ನಡೆದಿದ್ದು, ಉಡುಪಿ ಅದಮಾರು ಮಠದ ಶ್ರೀಗಳು ವಧು-ವರರನ್ನು ಆಶೀರ್ವದಿಸಿದ್ದಾರೆ. ಅದಮಾರು ಮಠದ ವೈದಿಕ ಪದ್ಧತಿಯಲ್ಲಿ ವಿವಾಹ ನೆರವೇರಿದೆ ಎಂದು ವರದಿಯೊಂದು ತಿಳಿಸಿದೆ.

Nirmala Sitharamans daughter gets married, no political leaders were invited

ವರದಿಗಳ ಪ್ರಕಾರ ಬೆಂಗಳೂರಿನ ನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಯಾವುದೇ ರಾಜಕೀಯ ಅತಿಥಿಗಳನ್ನು ಆಹ್ವಾನಿಸಲಾಗಿಲ್ಲ. ನಿಕಟ ಸಂಬಂಧಿಗಳನ್ನು ಮಾತ್ರ ಆಹ್ವಾನಿಸಲಾಗಿದೆ ಎಂದು ವರದಿ ತಿಳಿಸಿದೆ. ವಧು ಪರಕಾಲ ವಂಗಮಾಯಿ ಮದುವೆಯಲ್ಲಿ ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ್ದರು ವರನು ಬಿಳಿ ಪಂಚೆ ಮತ್ತು ಶಾಲು ಧರಿಸಿದ್ದರು. ವಧುವಿನ ತಾಯಿ ಸೀತಾರಾಮನ್ ಮೊಳಕಾಲ್ಮೂರು ಸೀರೆ ಉಟ್ಟಿದ್ದರು.

ಸೀತಾರಾಮನ್ ಅವರ ಮಗಳು ಪರಕಾಲ ವಂಗಮಾಯಿ ಮಿಂಟ್ ಲೌಂಜ್‌ನಲ್ಲಿ ಫಿಚರ್ಸ್‌ ವಿಭಾಗದ ಪುಸ್ತಕಗಳು ಮತ್ತು ಸಂಸ್ಕೃತಿ ವಿಭಾಗದಲ್ಲಿ ಕೆಲಸ ಮಾಡುತ್ತಾರೆ. ಅವರು ಇದಕ್ಕೂ ಮೊದಲು ದಿ ಹಿಂದೂ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ನಾರ್ತ್ ವೆಸ್ಟರ್ನ್ ಮೆಡಿಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ವಿಭಾಗದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ.

Nirmala Sitharamans daughter gets married, no political leaders were invited

ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ್ ಅವರು ರಾಜಕೀಯ ಅರ್ಥಶಾಸ್ತ್ರಜ್ಞರಾಗಿದ್ದು. ಅವರು ಸಂವಹನ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಜುಲೈ 2014 ಮತ್ತು ಜೂನ್ 2018 ರ ನಡುವೆ ಆಂಧ್ರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಹೊಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+