ಕಾಳೇನ ಅಗ್ರಹಾರ ಕೆರೆ ಅಭಿವೃದ್ಧಿ ಪ್ರಗತಿಯಲ್ಲಿದೆ: ನಿರ್ಮಲಾ ಸೀತಾರಾಮನ್
ಬೆಂಗಳೂರು, ಜು.17: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರ ಕರೆಯನ್ನು ದತ್ತು ತೆಗೆದುಕೊಂಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೆರೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಕಳೆದ ಮೇ ತಿಂಗಳಲ್ಲೂ ಎರಡು ಕೋಟಿ ರೂ. ವೆಚ್ಚದಲ್ಲಿ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಕಾಳೇನ ಅಗ್ರಹಾರ ಕೆರೆಯನ್ನು ದತ್ತು ತೆಗೆದುಕೊಂಡಿದ್ದರು.

ಸುಮಾರು ಮೂರೂವರೆ ಎಕರೆಯಷ್ಟು ವಿಸ್ತಾರವಾಗಿದ್ದ ಕಾಳೇನ ಅಗ್ರಹಾರ ಕೆರೆ ಇತ್ತೀಚಿನ ದಿನಗಳಲ್ಲಿ ಒತ್ತುವರಿಯಿಂದ ಗಾತ್ರ ಕುಗ್ಗಿದ್ದಲ್ಲದೆ ಸುತ್ತಮುತ್ತಲಿನ ವಿಷತ್ಯಾಜ್ಯ ಹಾಗು ಚರಂಡಿ ನೀರು ಕೆರೆಗೆ ಬಂದು ಸೇರುತ್ತಿತ್ತು. ಇದರಿಂದ ಸ್ಥಳೀಯರು ಬೇಸತ್ತಿದ್ದರು.
The work goes on Smt @nsitharaman 's adopted lake of Kalena Agrahara, near Bannerghatta Road, Bangalore. Bund creation and advanced stages of de-silting are currently in progress. #MPLADS pic.twitter.com/8cXuR1JuAr
— NSitharamanOffice (@nsitharamanoffc) July 16, 2018
ಹೀಗಾಗಿ ಕಳೆದ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಕಾಳೇನ ಅಗ್ರಹಾರ ಕೆರೆಗೆ ಭೇಟಿ ನೀಡಿದ್ದ ಸಚಿವೆ ಸ್ಥಳೀಯರ ಸಭೆ ಕರೆದು ಅವರ ಆಶೋತ್ತರಗಳಿಗೆ ಸ್ಪಂದಿಸಿ ಸ್ಥಳೀಯರ ಅಭಿಪ್ರಾಯದಂತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದರು.

ಇದೀಗ ಕೆರೆಯ ಸುತ್ತ ರಕ್ಷಣಾ ಗೋಡೆ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಇದೇ ವೇಳೆ ಕೆರೆಯ ಹೂಲೆತ್ತುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೆಲವು ಚಿತ್ರವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಳೇನ ಅಗ್ರಹಾರ ಸ್ವಚ್ಛಗೊಂಡರೆ ಸುತ್ತಮುತ್ತಲಿನ ಪ್ರದೇಶ ಶುಚಿಯಾಗುತ್ತದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಕಾಲೇನ ಅಗ್ರಹಾರ ಕೆರೆ ಅಭಿವೃದ್ಧಿಗೆ ಮುದಾಗಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications