ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದೇ ತಿಂಗಳಲ್ಲಿ ಕೋವಿಡ್ ಆಸ್ಪತ್ರೆ ನಿರ್ಮಾಣ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ!

|
Google Oneindia Kannada News

ಬೆಂಗಳೂರು, ಜು. 02: ರಾಜ್ಯಕ್ಕೆ ಎರಡು ದಿನಗಳ ಭೇಟಿ ಕೊಟ್ಟಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬೋಯಿಂಗ್ ಸಂಸ್ಥೆಯು 'ಸೆಲ್ಕೋ' ಹಾಗೂ 'ಡಾಕ್ಟರ್ಸ್ ಫಾರ್‌ ಯು' ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್ ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು.

Recommended Video

Bengaluru : 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಉದ್ಘಾಟನೆ | Nirmala Sitharaman |Oneindia Kannada

ಯಲಹಂಕದಲ್ಲಿ ಬೋಯಿಂಗ್ ಸಂಸ್ಥೆಯು ಕೊವಿಡ್ ಕೇರ್‌ ಆಸ್ಪತ್ರೆ ನಿರ್ಮಿಸುತ್ತಿರುವ ವಿಷಯವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲೇ ತಿಳಿಸಿದ್ದರು. ಮೇ 7ರಂದು ಈ ವಿಷಯವನ್ನು ಟ್ವೀಟ್ ಮಾಡಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಧನ್ಯವಾದ ಹೇಳಿದ್ದರು.

ಬೋಯಿಂಗ್ ಸಂಸ್ಥೆಯು 'ಸೆಲ್ಕೋ' ಮತ್ತು 'ಡಾಕ್ಟರ್ಸ್ ಫಾರ್‌ ಯು' ಸಹಯೋಗದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಕೊವಿಡ್ ಕೇರ್‌ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿರುವ ಕುರಿತು ನಿರ್ಮಲಾ ಸೀತಾರಾಮನ್ ಅವರು ಇದೇ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. "ಕಾರ್ಪೋರೇಟ್‌ ಕಂಪನಿಗಳು ತಮ್ಮ ಸಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಕೋವಿಡ್ ಅಲೆ ನಿಯಂತ್ರಣ, ಚಿಕಿತ್ಸೆಯಲ್ಲಿ ಭಾಗಿಯಾಗಿರುವುದು ಶ್ಲಾಘನೀಯ," ಎಂದು ಭೇಟಿ ಸಂದರ್ಭದಲ್ಲಿ ಹೇಳಿದ್ದಾರೆ.

Nirmala Sitharaman Visited Boeings 100 Bed State-of-the-Art Covid Care Specialty Hospital in Yelahanka

ಕರ್ನಾಟಕ ವಿದ್ಯುತ್‌ ನಿಗಮ ಆಸ್ಪತ್ರೆ ನಿರ್ಮಾಣಕ್ಕೆ ಅರ್ಧ ಎಕರೆ ಜಾಗ ಅಗತ್ಯ ಜಾಗ ಒದಗಿಸಿದೆ. ಸರ್ಕಾರೇತರ ಸಂಸ್ಥೆ 'ಡಾಕ್ಟರ್ಸ್‌ ಫಾರ್‌ ಯು' ಆಸ್ಪತ್ರೆ ನಿರ್ವಹಣೆ ಹಾಗೂ ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿ ವಹಿಸಿಕೊಂಡಿದೆ. ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.

English summary
Union Finance Minister Nirmala Sitharaman visited Boeing's 100-bed state-of-the-art Covid Care Specialty Hospital in Yelahanka in partnership with 'Selco' and 'Doctors for You'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X