• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತ ಕುಮಾರ್ ನಿಧನಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಶೋಕ

|

ಬೆಂಗಳೂರು, ನವೆಂಬರ್ 12: ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಅನಂತ ಕುಮಾರ್ ಅವರ ನಿಧನಕ್ಕೆ ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಾಲಾನಂದಾನಾಥ ಸ್ವಾಮೀಜಿ ತೀವ್ರ ಕಂಬನಿ ಮಿಡಿದಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದಿದ್ದ ಅನಂತ ಕುಮಾರ್ ,ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು. ರಾಜ್ಯದ ನೆಲ,ಜಲ, ಭಾಷೆ,ಸಾಹಿತ್ಯ, ಸೇರಿದಂತೆ ಯಾವುದೇ ವಿಷಯದಲ್ಲೂ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದರು. ಅವರ ನಿಧನ ರಾಷ್ಟ್ರ ಹಾಗೂ ಕರ್ನಾಟಕಕ್ಕೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ.

ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ

ಕೇಂದ್ರದ ಯಾವುದೇ ಯೋಜನೆಗಳನ್ನು ರಾಜ್ಯಕ್ಕೆ ತರುವಲ್ಲಿ ಅವರ ಪಾತ್ರ ಪ್ರಮುಖವಾಗಿರುತ್ತಿತ್ತು. ಕಾವೇರಿ ನದಿ ನೀರು ಬಿಕ್ಕಟ್ಟು ಪರಿಹರಿಸುವಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸುವಲ್ಲಿ ಮಂಚೂಣಿಯಲ್ಲಿರುತ್ತಿದ್ದರು.

ಶ್ರದ್ಧಾಂಜಲಿ:ರಾಜ್ಯ ನಾಯಕರ ಮನದಲ್ಲಿ 'ಅನಂತ'ಭಾವ

ಆದಿಚುಂಚನಗಿರಿ ಮಠದ ಪರಮ ಭಕ್ತರಾಗಿದ್ದ ಅನಂತ್ ಕುಮಾರ್ ನಿಧನ ಕೇವಲ ಬಿಜೆಪಿ ಮಾತ್ರವಲ್ಲದೆ ರಾಷ್ಟ್ರಕ್ಕೆ ತುಂಬಾ ಲಾರದ ನಷ್ಟವಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಶ್ರೀ ಗಳು ಪ್ರಾರ್ಥಿಸಿದ್ದಾರೆ.

English summary
Dr.Nirmalanandanatha swamiji of Adichunchanagiri mutt has condoles sad demise of Union minister Ananth kumar and described contribution of the minister to the state as well to the nation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X