ಬೆಂ-ಮೈ 10 ಪಥದ ರಸ್ತೆ ಕುರಿತು ನಿತಿನ್ ಗಡ್ಕರಿ ಟ್ವೀಟ್

ಬೆಂಗಳೂರು, ಮಾರ್ಚ್ 28; ಬೆಂಗಳೂರು-ಮೈಸೂರು ನಡುವಿನ 10 ಪಥದ ರಸ್ತೆ ಕಾಮಗಾರಿ ಚುರುಕಿನಿಂದ ನಡೆಯುತ್ತಿದೆ. 8,350 ಕೋಟಿ ರೂ.ಗಳ ಯೋಜನೆ ಇದಾಗಿದೆ.

ಸೋಮವಾರ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ 10 ಪಥದ ರಸ್ತೆ ಕಾಮಗಾರಿ ಕುರಿತು ಟ್ವೀಟ್ ಮಾಡಿದ್ದಾರೆ. ಯೋಜನೆಯ ಚಿತ್ರಗಳನ್ನು ಹಂಚಿಕೊಂಡು ವಿವರಗಳನ್ನು ನೀಡಿದ್ದಾರೆ.

ಬೆಂಗಳೂರು-ನಿಢಗಟ್ಟ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 10 ಪಥದ 117 ಕಿ. ಮೀ. ಯೋಜನೆಯಾಗಿದೆ. 8,350 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅಕ್ಟೋಬರ್ 2022ರೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

Nitin Gadkari Tweeted Bengaluru-Mysuru Road Pics

ಈ ಯೋಜನೆ ಪೂರ್ಣಗೊಂಡ ಬಳಿಕ ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅವಧಿ 3 ಗಂಟೆಯಿಂದ 75 ನಿಮಿಷಗಳಿಗೆ ಇಳಕೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Nitin Gadkari Tweeted Bengaluru-Mysuru Road Pics

ಈ ಯೋಜನೆ ಪೂರ್ಣಗೊಂಡ ಬಳಿಕ ಉಭಯ ನಗರಗಳ ನಡುವಿನ ಸಂಪರ್ಕ ಉತ್ತಮವಾಗಲಿದ್ದು, ಇದರಿಂದಾಗಿ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಸಹಕಾರಿಯಾಗಲಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಈ ಯೋಜನೆಯಡಿ 9 ಪ್ರಮುಖ ಸೇತುವೆ. 42 ಚಿಕ್ಕ ಸೇತುವೆಗಳು, 64 ಅಂಡರ್ ಪಾಸ್, 11 ಓವರ್ ಪಾಸ್‌, 4 ಆರ್‌ಓಬಿಗಳು, 5 ಬೈಪಾಸ್‌ಗಳು ಇವೆ ಎಂದು ಸಚಿವರು ಯೋಜನೆ ಕುರಿತು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂತಹ ಹಲವು ಮೂಲ ಸೌಕರ್ಯ ಯೋಜನೆಗಳು ಘೋಷಣೆಯಾಗಿವೆ. ಜವಾಬ್ದಾರಿಯುತವಾಗಿ ಅವುಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+