NLAT 2020 ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಂಗಳೂರು, ಸೆ. 14: ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) 2020 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಮಾಹಿತಿ ಬಂದಿದೆ.
ಈ ಬಗ್ಗೆ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಇಂದು ಮಧ್ಯಾಹ್ನ 12.30 ರಿಂದ 1.15 ರ ಅವಧಿಯಲ್ಲಿ ಪರೀಕ್ಷೆ ನಡೆಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿದ್ಯಾರ್ಥಿಗಳು ದೃಢಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಶನಿವಾರದಂದು ಪರೀಕ್ಷೆ ಬಗ್ಗೆ ಅನೇಕ ಗೊಂದಲ ಮೂಡಿತ್ತು. ವಿದ್ಯಾರ್ಥಿಗಳ ಫೇಸ್ ರೆಕಗ್ನಿಷನ್, ಹಾಲ್ ಟಿಕೆಟ್ ವೆರಿಫಿಕೇಷನ್, ಲಾಗಿನ್ ಎಲ್ಲವೂ ಸಮಸ್ಯೆಯಾಗಿತ್ತು. ಹೀಗಾಗಿ ಮರು ಪರೀಕ್ಷೆಯನ್ನು ಸೆ. 14ರಂದು ಮಧ್ಯಾಹ್ನ ನಡೆಸಲು ವಿವಿ ಮುಂದಾಗಿತ್ತು.

ದೇಶದ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕಾಗಿ ಒಕ್ಕೂಟವು ಕೇಂದ್ರೀಕೃತ ಪರೀಕ್ಷೆಯನ್ನು ನಡೆಸುತ್ತದೆ. ಸೋಂಕಿನ ಭೀತಿಯ ನಡುವೆ ಪರೀಕ್ಷೆಗೆ ಖುದ್ದು ಹಾಜರಾಗುವ ಅಗತ್ಯವನ್ನು ಪ್ರಶ್ನಿಸಿ ಕಾನೂನು ಪದವೀಧರರೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಎನ್‌ಎಲ್‌ಯು ಒಕ್ಕೂಟಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು.
ಇದೇ ರೀತಿ ಸಿಎಲ್‌ಎಟಿ ಪರೀಕ್ಷೆಗಳು ಹಲವು ಬಾರಿ ಮುಂದೂಡಲ್ಪಟ್ಟಿವೆ. ಏಪ್ರಿಲ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಮೇ 24ಕ್ಕೆ ಮುಂದೂಡಲಾಗಿತ್ತು. ಬಳಿಕ ಆಗಸ್ಟ್‌ಗೆ ಮುಂದೂಡಿಕೆಯಾಗಿತ್ತು. ಅದರಿಂದ ಸೆ. 7ಕ್ಕೆ ನಿಗದಿಯಾಗಿತ್ತು. ಈಗ ಸೆ. 28ಕ್ಕೆ ಮುಂದೂಡಲಾಗಿದೆ.
Recommended Video
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications