ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಲಪತಿ ನೇಮಕ ವಿಳಂಬ: ರಾಷ್ಟ್ರೀಯ ಕಾನೂನು ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24: ವಿಶ್ವವಿದ್ಯಾಲಯ ಕುಲಪತಿ ನೇಮಕ ತಡವಾಗುತ್ತಿರುವುದಕ್ಕೆ ಆಕ್ರೋಶಗೊಂಡಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿರ್ಸಿಟಿ ವಿದ್ಯಾರ್ಥಿಗಳು ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿಎರಡು ತಿಂಗಳಿಂದ ಖಾಲಿಯಿರುವ ಕುಲಪತಿ ಹುದ್ದೆಯನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಐದು ದಿನಗಳಿಂದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ, ಸೋಮವಾರವೂ ಮುಂದುವರಿದಿತ್ತು. 'ಎನ್‌ಎಲ್‌ಎಸ್‌ಐನ ಸ್ಟೂಡೆಂಟ್‌ ಬಾರ್‌ ಅಸೋಸಿಯೇಷನ್‌' ನೇತೃತ್ವದಲ್ಲಿವಿದ್ಯಾರ್ಥಿಗಳು ತರಗತಿ ಹಾಗೂ ಪರೀಕ್ಷೆಯನ್ನು ಬಹಿಷ್ಕರಿಸಿ ಧರಣಿ ನಡೆಸಿದರು.

ಬಳಿಕ ನ್ಯಾ. ಶರದ್ ಅರವಿಂದಗ ಬೊಬ್ಡೆ ಅವರ ನೇತೃತ್ವದ ಕಾರ್ಯಕಾರಿ ಮಂಡಳಿಯ ವರದಿಯಂತೆ ಕುಲಪತಿ ನೇಮಕ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟು ಇಂದುನಿಂದ ತರಗತಿಗೆ ಹಾಜರಾಗಲು ತೀರ್ಮಾನಿಸಿದ್ದಾರೆ.

NLS Bangalore Students Call Off Protests

ನಮ್ಮ ಹೋರಾಟ ಕುಲಪತಿಗಳ ನೇಮಕಾತಿಯಲ್ಲಿವಿಳಂಬ ನೀತಿಯ ವಿರುದ್ಧವೇ ಹೊರತು, ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೇಲಲ್ಲ ಎಂದು ವಿದ್ಯಾರ್ಥಿಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಭಾರತದ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಮತ್ತು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೊಬ್ಡೆ ನೇತೃತ್ವದ ಕಾರ್ಯಕಾರಿ ಮಂಡಳಿ ಆಯ್ಕೆ ಮಾಡಿರುವ ಡಾ.ಸುೕಧೀರ್‌ ಕೃಷ್ಣಸ್ವಾಮಿ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
NLS Bangalore Students Call Off Protests, After receiving assurance from the administration that their demands will be met.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X