ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ
ಬೆಂಗಳೂರು, ಜು. 25 : ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಅತ್ಯಾಚಾರದ ಪ್ರಕರಣಗಳನ್ನು ಖಂಡಿಸಿ ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಮಹಿಳೆಯರ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕಗಳನ್ನು ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿ ಪ್ರದರ್ಶಿಸಿದರು.
ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಬೆಂಗಳೂರು ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶಾಂತಾ ಶಾಸ್ತ್ರೀ ಅವರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. [ಅತ್ಯಾಚಾರ ಖಂಡಿಸಿ ಜು.31ರಂದು ಬೆಂಗಳೂರು ಬಂದ್]
ಬೆಳಗ್ಗೆ ಎನ್‌ಎಂಕೆಆರ್‌ವಿ ಕಾಲೇಜಿನಿಂದ ಬೃಹತ್ ಜಾಥಾ ನಡೆಸಿದ ವಿದ್ಯಾರ್ಥಿನಿಯರು ಕಾಸ್ಮೋಪಾಲಿಟನ್ ಕ್ಲಬ್, ಜಯನಗರ 4ನೇ ಬ್ಲಾಕ್ ಮುಖ್ಯ ರಸ್ತೆ ಮೂಲಕ ಸೌಂತ್ ಎಂಡ್ ವೃತ್ತ ತಲುಪಿದರು. ಸೌತ್ ಎಂಡ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಚಿತ್ರಗಳು ಇಲ್ಲಿವೆ

ಎನ್‌ಎಂಕೆಆರ್‌ವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
ಬೆಂಗಳೂರು ಮತ್ತು ರಾಜ್ಯದಲ್ಲಿ ನಡೆದ ಸರಣಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಶುಕ್ರವಾರ ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಪ್ರಾಂಶುಪಾಲರ ನೇತೃತ್ವದಲ್ಲಿ ಪ್ರತಿಭಟನೆ
ಎನ್‌ಎಂಕೆಆರ್‌ವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಾಂತಾ ಶಾಸ್ತ್ರೀ ಅವರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಅತ್ಯಾಚಾರ ನಿಲ್ಲಿಸಿ
ಎನ್‌ಎಂಕೆಆರ್‌ವಿ ಕಾಲೇಜಿನಿಂದ ಆರಂಭವಾದ ಬೃಹತ್ ಜಾಥಾ ಕಾಸ್ಮೋಪಾಲಿಟನ್ ಕ್ಲಬ್, ಜಯನಗರ 4ನೇ ಬ್ಲಾಕ್ ಮುಖ್ಯ ರಸ್ತೆ ಮೂಲಕ ಸೌಂತ್ ಎಂಡ್ ವೃತ್ತ ತಲುಪಿತು.

ಬೀದಿ ನಾಟಕ ಪ್ರದರ್ಶನ
ಎನ್‌ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿಯರು ಜಯನಗರ ಮೂರನೇ ಬ್ಲಾಕ್, ಸೌತ್ ಅಂಡ್ ವೃತ್ತದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕಗಳನ್ನು ಪ್ರದರ್ಶಿಸಿದರು.

ಮಾನವ ಸರಪಳಿ ರಚನೆ
ಸೌತ್ ಎಂಡ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ವಿದ್ಯಾರ್ಥಿನಿಯರು ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.












Click it and Unblock the Notifications