ಬನ್ನೇರುಘಟ್ಟ ಗಣಿಗಾರಿಕೆ ಪರವಾನಗಿ ರದ್ದತಿಗೆ ಪತ್ರ
ಬೆಂಗಳೂರು, ಡಿಸೆಂಬರ್ 12: ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಅಥವಾ ಕ್ರಷರ್ ನಡೆಸುವುದರಿಂದ ಸುತ್ತಮುತ್ತಲಿರುವ ಪ್ರಾಣಿಗಳಿಗೆ ಹಾನಿ ಉಂಟಾಗುತ್ತದೆ ಜತೆಗೆ ನಿವಾಸಿಗಳಿಗೂ ತೊಂದರೆಯಾಗುತ್ತಿದೆ. ಹೀಗಾಗಿ ಬನ್ನೇರುಘಟ್ಟ ಸುತ್ತಮುತ್ತ ಗಣಿಗಾರಿಕೆ ನಿಲ್ಲಿಸಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ.
ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್‌ನ ಪರಿಸರ ಸೂಕ್ಷ್ಮ ವಲಯದಲ್ಲಿರುವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಚಟುವಟಿಕೆಗಳಿಗೆ ನೀಡಿರುವ ಪರವಾನಗಿ ರದ್ದುಗೊಳಿಸುವಂತೆ ಆನೇಕಲ್ ತಾಲೂಕಿನ ತಹಸೀಲ್ದಾರ್ ಹಾಗೂ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬೆಂಗಳೂರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು ಆದರೆ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂಬುದು ತಿಳಿದುಬಂದಿದೆ.

2009ರಲ್ಲಿ ಕಂದಾಯ ಇಲಾಖೆಯು 207 ಎಕರೆ 24 ಗುಂಟೆ ಜಾಗವನ್ನು ಪಾಲಿಕೆಗೆ ಹಸ್ತಾಂತರಿಸಿದೆ.ಆದರೆ 2010ರಲ್ಲಿ ಅದೇ ಇಲಾಖೆಯು ಪರಿಸರ ಸೂಕ್ಷ್ಮ ವಲಯದಲ್ಲಿ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಚಟುವಟಿಕೆಗಳನ್ನು ನಡೆಸಲು ಪರವಾನಗಿ ನೀಡಿರುವುದು ಅಚ್ಚರಿ ಮೂಡಿಸಿದೆ.
ಆನೇಕಲ್ ತಹಸೀಲ್ದಾರ್ ಕೂಡ ಸೆಪ್ಟೆಂಬರ್‌ನಲ್ಲಿಯೇ ಪತ್ರ ಬರೆದಿದ್ದರು. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರು 2018 ಆಗಸ್ಟ್ ತಿಂಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು.












Click it and Unblock the Notifications