• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬನ್ನೇರುಘಟ್ಟ ಗಣಿಗಾರಿಕೆ ಪರವಾನಗಿ ರದ್ದತಿಗೆ ಪತ್ರ

|

ಬೆಂಗಳೂರು, ಡಿಸೆಂಬರ್ 12: ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಅಥವಾ ಕ್ರಷರ್ ನಡೆಸುವುದರಿಂದ ಸುತ್ತಮುತ್ತಲಿರುವ ಪ್ರಾಣಿಗಳಿಗೆ ಹಾನಿ ಉಂಟಾಗುತ್ತದೆ ಜತೆಗೆ ನಿವಾಸಿಗಳಿಗೂ ತೊಂದರೆಯಾಗುತ್ತಿದೆ. ಹೀಗಾಗಿ ಬನ್ನೇರುಘಟ್ಟ ಸುತ್ತಮುತ್ತ ಗಣಿಗಾರಿಕೆ ನಿಲ್ಲಿಸಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ.

ಬನ್ನೇರುಘಟ್ಟ ನ್ಯಾಷನಲ್‌ ಪಾರ್ಕ್‌ನ ಪರಿಸರ ಸೂಕ್ಷ್ಮ ವಲಯದಲ್ಲಿರುವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಚಟುವಟಿಕೆಗಳಿಗೆ ನೀಡಿರುವ ಪರವಾನಗಿ ರದ್ದುಗೊಳಿಸುವಂತೆ ಆನೇಕಲ್ ತಾಲೂಕಿನ ತಹಸೀಲ್ದಾರ್ ಹಾಗೂ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬೆಂಗಳೂರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು ಆದರೆ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂಬುದು ತಿಳಿದುಬಂದಿದೆ.

2009ರಲ್ಲಿ ಕಂದಾಯ ಇಲಾಖೆಯು 207 ಎಕರೆ 24 ಗುಂಟೆ ಜಾಗವನ್ನು ಪಾಲಿಕೆಗೆ ಹಸ್ತಾಂತರಿಸಿದೆ.ಆದರೆ 2010ರಲ್ಲಿ ಅದೇ ಇಲಾಖೆಯು ಪರಿಸರ ಸೂಕ್ಷ್ಮ ವಲಯದಲ್ಲಿ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಚಟುವಟಿಕೆಗಳನ್ನು ನಡೆಸಲು ಪರವಾನಗಿ ನೀಡಿರುವುದು ಅಚ್ಚರಿ ಮೂಡಿಸಿದೆ.

ಬನ್ನೇರುಘಟ್ಟ ಉದ್ಯಾನ ಸುತ್ತ ಶೀಘ್ರ ಕಲ್ಲು ಗಣಿಗಾರಿಕೆ ರದ್ದು

ಆನೇಕಲ್ ತಹಸೀಲ್ದಾರ್ ಕೂಡ ಸೆಪ್ಟೆಂಬರ್‌ನಲ್ಲಿಯೇ ಪತ್ರ ಬರೆದಿದ್ದರು. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರು 2018 ಆಗಸ್ಟ್ ತಿಂಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು.

English summary
Three months after the Additional Chief Secretary, Urban Development Department, and Tahsildar of Anekal Taluk wrote to Deputy Commissioner of Bengaluru Urban to cancel the licences issued for mining and crushing activities in the Eco-Sensitive Zone (ESZ) of Bannerghatta National Park (BNP), no action has been taken by the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X