ರವಿ ಬೆಳಗೆರೆ ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು, ಡಿಸೆಂಬರ್ 06 : ರವಿ ಬೆಳಗೆರೆ ಪ್ರಕರಣ ಅಂತಿಮ ಆದೇಶದ ವರೆಗೂ ಬಂಧನ ಮಾಡದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಗೆ ವಿಧಾನಸಭೆಯ ಹಕ್ಕುಬಾಧ್ಯತಾ ಸಮಿತಿಯು ಒಂದು ವರ್ಷ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂ. ದಂಡ ವಿಧಿಸಿತ್ತು. ಈ ತೀರ್ಮಾನದ ವಿರುದ್ಧ ಇಬ್ಬರೂ ಪತ್ರಕರ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ನಂತರ ಈ ಪ್ರಕರಣದ ಮರುಪರಿಶೀಲಿಸುವಂತೆ ವಿಧಾನಸಭೆ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರಿಗೆ ಮನವಿ ಮಾಡಿದ್ದರು.

ಈ ವಿಚಾರವಾಗಿ ಬುಧವಾರ ಹೈಕೋರ್ಟ್ ಅಂತಿಮ ಆದೇಶ ಬರುವವರೆಗೂ ರವಿ ಬೆಳಗೆರೆಯನ್ನು ಬಂಧನ ಮಾಡದಂತೆ ಮಧ್ಯಂತರ ಆದೇಶ ನೀಡಿದೆ.












Click it and Unblock the Notifications