ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕಿಗೆ ತುತ್ತಾದ ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 17: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಶನಿವಾರ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಲು ಬಯಸಿದ ಅವರಿಗೆ ಬೆಡ್ ಇಲ್ಲ ಎಂದು ಆಸ್ಪತ್ರೆ ತಿಳಿಸಿದೆ.

Recommended Video

ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ | Oneindia Kannada

ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗುಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಹಾಸಿಗೆ ಪಡೆಯಲು ಏನು ಮಾಡಬೇಕು ಎಂಬ ಮಾತು ಈಗ ಕೇಳಿ ಬರುತ್ತಿದೆ. ಎಚ್. ಡಿ. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ. ಪಿ. ನಗರದ ನಿವಾಸದಲ್ಲಿಯೇ ಇದ್ದಾರೆ. ಆಸ್ಪತ್ರೆಗೆ ಸೇರಲು ವಿಚಾರಿಸಿದಾಗ ಸದ್ಯಕ್ಕೆ ಬೆಡ್ ಲಭ್ಯವಿಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ಮುಂದೆ ಓದಿ...

ಎಚ್‌. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ ಎಚ್‌. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ

ಉಪಚುನಾವಣೆ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿ

ಉಪಚುನಾವಣೆ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿ

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿಗೆ ಮರಳಿದವರು ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಢಪಟ್ಟಿದೆ.

ಆಸ್ಪತ್ರೆಗೆ ದಾಖಲಾಗಲು ವೈದ್ಯರ ಸಲಹೆ

ಆಸ್ಪತ್ರೆಗೆ ದಾಖಲಾಗಲು ವೈದ್ಯರ ಸಲಹೆ

ವೈದ್ಯರ ಬಳಿ ಮಾತುಕತೆ ನಡೆಸಿ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರೆ. ಆದರೆ ವೈದ್ಯರು ಇದಕ್ಕೆ ಒಪ್ಪಿಗೆ ನೀಡಿಲ್ಲ. ಈ ವಿಷಯದಲ್ಲಿ ಸಮಸ್ಯೆ ತಂದುಕೊಳ್ಳುವುದು ಬೇಡ. ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗಿ ಎಂದು ಸಲಹೆ ನೀಡಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ಯತ್ನಿಸಿದರೂ ಬೆಡ್ ಸಿಕ್ಕಿಲ್ಲ

ಆರೋಗ್ಯ ಸಚಿವ ಸುಧಾಕರ್ ಯತ್ನಿಸಿದರೂ ಬೆಡ್ ಸಿಕ್ಕಿಲ್ಲ

ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ. ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನ್ ಮಾಡಿದ್ದು, ಬೆಡ್ ಸಿಕ್ಕಿದೆ. ಆದರೆ ಬೆಡ್ ಸಿಕ್ಕರೂ ಅವರು ತಕ್ಷಣ ದಾಖಲಾಗಿಲ್ಲ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿದೆ. ಆದರೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ಕೂಡ ಅನುಮಾನವಾಗಿದೆ.

 ವಿಡಿಯೋ ಕಾನ್ಸರೆನ್ಸ್ ಮೂಲಕ ವಿಚಾರಣೆಗೆ ಹಾಜರು

ವಿಡಿಯೋ ಕಾನ್ಸರೆನ್ಸ್ ಮೂಲಕ ವಿಚಾರಣೆಗೆ ಹಾಜರು

ಸದ್ಯಕ್ಕೆ ವಿಡಿಯೋ ಕಾನ್ ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಕುಮಾರಸ್ವಾಮಿ ನಿರ್ಧರಿಸಿದ್ದು, ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ವಿಧಾನಪರಿಷತ್ ಸದಸ್ಯ ಎಚ್. ಎಂ. ರಮೇಶಗೌಡ ಅವರು ಈ ಮಾಹಿತಿ ನೀಡಿದ್ದಾರೆ.

English summary
HD Kumaraswamy tests positive for Covid-19, Manipal hospital says no bed available for him to admit in hospital,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X