ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಸೋಂಕಿತರಿಗೆ ಬೆಡ್ ಇಲ್ಲ; 19 ಆಸ್ಪತ್ರೆಗಳ ಲೈಸೆನ್ಸ್ ರದ್ದು!

|
Google Oneindia Kannada News

ಬೆಂಗಳೂರು, ಜುಲೈ 31 : ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಶೇ 50ರಷ್ಟು ಹಾಸಿಗೆ ಮೀಸಲಿಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಆದರೆ ಈ ಆದೇಶ ಪಾಲನೆಯಾಗುತ್ತಿಲ್ಲ.

ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 53,324ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿತ ರೋಗಿಗಳಿಗೆ ಹಾಸಿಗೆ ಮೀಸಲಿಡಲು ವಿಫಲವಾದ ಆಸ್ಪತ್ರೆಗಳಿಗೆ ಬಿಬಿಎಂಪಿ ಬಿಸಿ ಮುಟ್ಟಿಸುತ್ತಿದೆ.

ಕೋವಿಡ್ ಚಿಕಿತ್ಸೆ; ಆಸ್ಪತ್ರೆಗಳ ಜವಾಬ್ದಾರಿ ಬಗ್ಗೆ ತಿಳಿಯಿರಿ ಕೋವಿಡ್ ಚಿಕಿತ್ಸೆ; ಆಸ್ಪತ್ರೆಗಳ ಜವಾಬ್ದಾರಿ ಬಗ್ಗೆ ತಿಳಿಯಿರಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಶೇ 50ರಷ್ಟು ಹಾಸಿಗೆ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ಬಿಬಿಎಂಪಿ ಆರೋಗ್ಯಾಧಿಕಾರಿಗಳ ತಂಡ ತಾತ್ಕಾಲಿಕವಾಗಿ ರದ್ದು ಮಾಡಿದೆ.

ಬಡವರಿಗಾಗಿ ಕಚೇರಿಯನ್ನು ಕೋವಿಡ್ ಆಸ್ಪತ್ರೆ ಮಾಡಿದ ಉದ್ಯಮಿ! ಬಡವರಿಗಾಗಿ ಕಚೇರಿಯನ್ನು ಕೋವಿಡ್ ಆಸ್ಪತ್ರೆ ಮಾಡಿದ ಉದ್ಯಮಿ!

ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ತಂಡ ತಾತ್ಕಾಲಿಕವಾಗಿ ಪರವಾನಗಿಯನ್ನು ರದ್ದುಪಡಿಸಿದೆ. ಆಸ್ಪತ್ರೆಗಳ ಮುಂಭಾಗ ಸಾರ್ವಜನಿಕ ಪ್ರಕಟಣೆ ಬ್ಯಾನರ್‌ಗಳನ್ನು ಸಹ ಅಳವಡಿಕೆ ಮಾಡಲಾಗಿದೆ.

ಅಪೊಲೋ ಆಸ್ಪತ್ರೆ ವಿರುದ್ಧ ಕ್ರಮ; ಕೆ. ಸುಧಾಕರ್ ಟ್ವೀಟ್ ಅಪೊಲೋ ಆಸ್ಪತ್ರೆ ವಿರುದ್ಧ ಕ್ರಮ; ಕೆ. ಸುಧಾಕರ್ ಟ್ವೀಟ್

ಪೊಲೀಸ್ ಠಾಣೆಯಲ್ಲಿ ದೂರು

ಪೊಲೀಸ್ ಠಾಣೆಯಲ್ಲಿ ದೂರು

ಕೋವಿಡ್ - 19 ಸೋಂಕಿತರಿಗೆ ಹಾಸಿಗೆ ಮೀಸಲಿಡದ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ಮಾತ್ರ ಬಿಬಿಎಂಪಿ ರದ್ದು ಮಾಡುವುದಿಲ್ಲ. ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲು ಮಾಡುತ್ತದೆ.

ರಾಜ್ಯ ಸರ್ಕಾರದ ಆದೇಶ

ರಾಜ್ಯ ಸರ್ಕಾರದ ಆದೇಶ

ಕರ್ನಾಟಕ ಸರ್ಕಾರದ ಆದೇಶದಂತೆ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 50 ಹಾಸಿಗೆ ಮೀಸಲಿಟ್ಟು, ಸರ್ಕಾರ ನಿಗದಿಪಡಿಸಿರುವ ದರವನ್ನು ಮಾತ್ರ ಕೋವಿಡ್ ಸೋಂಕಿರಿಂದ ಸಂಗ್ರಹಿಸಬೇಕು. ಇದನ್ನು ಪಾಲಿಸದಿದ್ದಲ್ಲಿ ಲೈಸೆನ್ಸ್ ರದ್ದಾಗಿ, ದೂರು ದಾಖಲಾಗುತ್ತದೆ.

ಆಸ್ಪತ್ರೆಗಳಿಗೆ ಎಚ್ಚರಿಕೆ

ಆಸ್ಪತ್ರೆಗಳಿಗೆ ಎಚ್ಚರಿಕೆ

ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳು ಬೆಡ್ ನೀಡಬೇಕು ಎಂದು ಸೂಚನೆ ನೀಡಿದೆ. ಇದನ್ನು ಉಲ್ಲಂಘನೆ ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಮುಖ್ಯಮಂತ್ರಿಗಳ ಸಭೆ

ಮುಖ್ಯಮಂತ್ರಿಗಳ ಸಭೆ

ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಯಡಿಯೂರಪ್ಪ ಸಭೆ ನಡೆಸಿ ಶೇ 50ರಷ್ಟು ಹಾಸಿಗೆ ಮೀಸಲಿಡಬೇಕು ಎಂದು ಸೂಚನೆ ಕೊಟ್ಟಿದ್ದರು. ಇದನ್ನು ಪಾಲಿಸದ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿದೆ.

English summary
BBMP cancelled the license of 19 private hospital in Bengaluru south for not reserve 50 per cent of bed for COVID -19 patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X