ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ರಾತ್ರಿ 8ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

|
Google Oneindia Kannada News

ಬೆಂಗಳೂರು, ಜುಲೈ 01 : ಕರ್ನಾಟಕ ಸರ್ಕಾರ ರಾತ್ರಿ 8 ರಿಂದ ಬೆಳಗ್ಗೆ 5ರ ತನಕ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದ್ದು, ವಾಹನ ಸಂಚಾರ ಬಂದ್ ಆಗಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳು ರಾತ್ರಿ 8ರ ಬಳಿಕ ಸಂಚಾರ ನಡೆಸುವುದಿಲ್ಲ. ಎಲ್ಲಾ ಡಿಪೋಗಳಿಗೆ ರಾತ್ರಿ 8 ಗಂಟೆ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.

ಬಿಎಂಟಿಸಿಯ 9 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ: ಹೆಚ್ಚಿದ ಆತಂಕಬಿಎಂಟಿಸಿಯ 9 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ: ಹೆಚ್ಚಿದ ಆತಂಕ

ಹೆಚ್ಚಿನ ಜನಸಂದಣಿ ಇದ್ದರೆ ಮಾತ್ರ ಮೆಜೆಸ್ಟಿಕ್, ಶಿವಾಜಿನಗರ, ಬನಶಂಕರಿ, ಕೆಂಗೇರಿ, ಯಶವಂತಪುರ ಮುಂತಾದ ನಿಲ್ದಾಣಗಳಿಂದ ರಾತ್ರಿ 9 ಗಂಟೆ ತನಕ ಬಸ್ ಓಡಿಸಬಹುದು. ಇಲ್ಲವಾದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 6ರ ಬಸ್ ಸಂಚಾರ ನಿಲ್ಲಿಸಲು ಸೂಚನೆ ಕೊಡಲಾಗಿದೆ.

ಮಾಸ್ಕ್ ಧರಿಸದಿದ್ದರೆ ಬಿಎಂಟಿಸಿ ಚಾಲಕ, ನಿರ್ವಾಹಕರಿಗೆ 500 ರೂ. ದಂಡಮಾಸ್ಕ್ ಧರಿಸದಿದ್ದರೆ ಬಿಎಂಟಿಸಿ ಚಾಲಕ, ನಿರ್ವಾಹಕರಿಗೆ 500 ರೂ. ದಂಡ

No BMTC Bus Service From 8 PM To 6 AM

ಲಾಕ್ ಡೌನ್ ಸಮಯದಲ್ಲಿ ಬೆಂಗಳೂರು ನಗರದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಕೆಲವು ಷರತ್ತುಗಳ ಜೊತೆಗೆ ಬಸ್ ಓಡಿಸಲು ಅನುಮತಿ ನೀಡಲಾಗಿತ್ತು. ಕಳೆದ ತಿಂಗಳು 10 ಲಕ್ಷ ಜನರು ಬಿಎಂಟಿಸಿ ಬಸ್‌ಗಳಲ್ಲಿ ಸಂಚಾರ ನಡೆಸಿದ್ದಾರೆ.

ಬೆಂಗಳೂರಲ್ಲಿ ಪ್ರಯಾಣಿಕರ ಪರದಾಟ: ಎಲ್ಲಿ ಹೋಯ್ತು ಬಸ್.?ಬೆಂಗಳೂರಲ್ಲಿ ಪ್ರಯಾಣಿಕರ ಪರದಾಟ: ಎಲ್ಲಿ ಹೋಯ್ತು ಬಸ್.?

ಪ್ರಸ್ತುತ ಬಿಎಂಟಿಸಿ 4 ಸಾವಿರ ಟ್ರಿಪ್‌ಗಳನ್ನು ನಡೆಸುತ್ತಿದೆ. ಉತ್ತರ ವಲಯದಲ್ಲಿ 1ಸಾವಿರ, ಪಶ್ಚಿಮದಲ್ಲಿ 900, ದಕ್ಷಿಣದಲ್ಲಿ 800 ಟ್ರಿಪ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿ ಬಸ್ 125 ಕಿ. ಮೀ. ಗಿಂತ ಹೆಚ್ಚಿನ ಸಂಚಾರ ನಡೆಸುತಿಲ್ಲ.

ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಬಳಿಕ ಕರ್ನಾಟಕ ಸರ್ಕಾರ ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಣೆ ಮಾಡಿತು. ಕರ್ನಾಟಕದಲ್ಲಿ ಮಂಗಳವಾರ 947 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ.

English summary
To follow night curfew BMTC depot managers told to completely halt operations of buses between 8 pm and 6 am in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X