ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಮದ್ಯ ಮಾರಾಟ ಇರುತ್ತಾ, ಇಲ್ವಾ?

ಬೆಂಗಳೂರು, ಡಿಸೆಂಬರ್ 13 : ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಎರಡು ದಿನ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

2016 ರ ಡಿ.31 ರ ಮಧ್ಯರಾತ್ರಿ ಮತ್ತು ಜನವರಿ 1 ರಂದು ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ನಗರದಲ್ಲಿ ಹಲವೆಡೆ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.

No boozing on new year? High court will decide

ಅಂತೆಯೇ, ಹೊಸ ವರ್ಷದ ಆಚರಣೆ ಪ್ರಯುಕ್ತ ಯುವಕರು ರಾತ್ರಿ ವೇಳೆ ಮದ್ಯಪಾನ ಮಾಡಿ, ವಾಹನ ಚಲಾಯಿಸಿ ಅಪಘಾತಕ್ಕೆ ಗುರಿಯಾದ ಉದಾಹರಣೆಗೂ ಇದೆ. ಹೀಗಾಗಿ ಬೆಂಗಳೂರು ನಿವಾಸಿ ಎನ್. ನಾಗೇಶ್ ಎಂಬುವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಬಾರಿ ಇಂತಹ ಅವಘಡ ತಪ್ಪಿಸುವ ಸಲುವಾಗಿ 2017 ರ ಡಿ.31 ರಂದು ಹೊಸ ವರ್ಷ 2018 ರ ಜನವರಿ 1 ರಂದು ರಾಜ್ಯದಲ್ಲಿ ಮಾರಾಟ ನಿರ್ಬಂಧ ಹೇರಲು ರಾಜ್ಯಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅರ್ಜಿಯಲ್ಲಿ ಅಬಕಾರಿ ಆಯುಕ್ತರು, ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶೀ, ಬೆಂಗಳೂರು ಪೊಲೀಸ್ ಆಯುಕ್ತರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿಯನ್ನು ಪ್ರತಿವಾದಿ ಮಾಡಲಾಗಿದೆ. ಈ ಅರ್ಜಿ ಬುಧವಾರ(ಡಿ.13) ಹಂಗಾವಿ ಮುಖ್ಯ ನ್ಯಾಯಮೂರ್ತಿ ಎಚ್,.ಜಿ. ರಮೇಶ್ ಮತ್ತು ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿರುವ ಪೀಠದ ಮುಂದೆ ವಿಚಾರಣೆ ನಿಗದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+