ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತ ಕುಮಾರ್ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ಇಲ್ಲ?

|
Google Oneindia Kannada News

Recommended Video

Ananth Kumar Demise : ಅನಂತ್ ಕುಮಾರ್ ಸಾವಿನಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ಇಲ್ಲ | Oneindia Kannada

ಬೆಂಗಳೂರು, ನವೆಂಬರ್ 13: ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಮತ ಕ್ಷೇತ್ರದ ಸ್ಥಾನ ತೆರವಾಗಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆಯುವುದು ಅನುಮಾನ ಎನ್ನುವ ಮಾಹಿತಿ ಲಭ್ಯವಾಗಿದೆ.

ಮುಂದಿನ ಸಾರ್ವತ್ರಿಕ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇದ್ದು, ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗಿದೆ.

ಅನಂತ್‌ ಕುಮಾರ್ ಮುಖ್ಯಮಂತ್ರಿ ಆಗಲೇ ಇಲ್ಲ: ಕಾರಣ ಏನು? ಅನಂತ್‌ ಕುಮಾರ್ ಮುಖ್ಯಮಂತ್ರಿ ಆಗಲೇ ಇಲ್ಲ: ಕಾರಣ ಏನು?

ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗೆ ಕರ್ನಾಟಕದ ಐದು ಕ್ಷೇತ್ರಗಳು ಸೇರಿದಂತೆ ದೇಶದ ಹಲವೆಡೆ ಉಪ ಚುನಾವಣೆಗಳನ್ನು ಮಾಡಿ ಮುಗಿಸಿದೆ. ಅಷ್ಟೇ ಅಲ್ಲದೆ ಮಧ್ಯಪ್ರದೇಶ ಸೇರಿದಂತೆ ಈಗಾಗಲೇ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದಾಗಿ ಉಳಿದಿರುವ ಐದು ತಿಂಗಳ ಅವಧಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆಯೋಗ ಆಸಕ್ತಿ ತೋರುತ್ತಿಲ್ಲ ಎನ್ನಲಾಗುತ್ತಿದೆ.

ಕೇಂದ್ರ ಚುನಾವಣಾ ಆಯೋಗದ ನಿಯಮಾವಳಿ ಪ್ರಕಾರ ಯಾವುದೇ ಜನಪ್ರತಿನಿಧಿ ಅಕಾಲಿಕ ನಿಧನ ಹೊಂದಿದರೆ ಅಥವಾ ರಾಜೀನಾಮೆ ನೀಡಿದರೆ ಆ ಸ್ಥಾನದ ಅವಧಿ ಮುಂದಿನ ಆರು ತಿಂಗಳಿಗೆ ಕಡಿಮೆ ಇಲ್ಲದಂತೆ ಇರಬೇಕಾಗುತ್ತದೆ.

ಅನಂತ್ ಕುಮಾರ್ ಇಲ್ಲದ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು?ಅನಂತ್ ಕುಮಾರ್ ಇಲ್ಲದ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು?

ಇಲ್ಲವೇ ಸರ್ಕಾರ ಮುಂದಿನ ಒಂದು ವರ್ಷದಲ್ಲಿ ಅಸ್ತಿತ್ವದಲ್ಲಿ ಇರುತ್ತದೆ ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕಾಗುತ್ತದೆ. ಆಗ ಮಾತ್ರ ಆ ಸ್ಥಾನಕ್ಕೆ ಚುನಾವಣೆ ನಡೆಸಬೇಕಾಗುತ್ತದೆ. ಆದರೆ 2019ರ ಲೋಕಸಭೆ ಚುನಾವಣೆಗೆ 6 ತಿಂಗಳಿಗಿಂತ ಕಡಿಮೆ ಅವಧಿ ಇರುವುದರಿಂದ ಸಚಿವ ಅನಂತ ಕುಮಾರ್ ನಿಧನದಿಂದ ತೆರವಾದ ಸ್ಥಾನ ಮುಂದಿನ ಐದು ತಿಂಗಳುಗಳ ಕಾಲ ಖಾಲಿಯಾಗಿಯೇ ಇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚುನಾವಣಾ ಆಯೋಗ ಹೇಳುವುದೇನು?

ಚುನಾವಣಾ ಆಯೋಗ ಹೇಳುವುದೇನು?

ಚುನಾವಣಾ ಆಯೋಗ ಏನು ಹೇಳುತ್ತೆ?:1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 151ಎ ಅಡಿಯ ಪ್ರಕಾರ, ಸಂಸತ್ ಅಥವಾ ವಿಧಾನಸಭೆ ಕ್ಷೇತ್ರದ ಜನಪ್ರತಿನಿಧಿ ಮೃತಪಟ್ಟರೆ ಅಥವಾ ರಾಜೀನಾಮೆ ನೀಡಿದರೆ, ಅವರಿಂದ ತೆರವಾದ ಕ್ಷೇತ್ರವನ್ನು ಆ ದಿನಾಂಕದಿಂದ ಆರು ತಿಂಗಳ ಒಳಗೆ ಉಪಚುನಾವಣೆ ಮೂಲಕ ಭರ್ತಿ ಮಾಡುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿರುತ್ತದೆ.

ಒಂದು ವರ್ಷದ ಮಿತಿ

ಒಂದು ವರ್ಷದ ಮಿತಿ

ಕಾನೂನಿನ ಪ್ರಕಾರ, ಮುಂದಿನ ಸಾರ್ವತ್ರಿಕ ಚುನಾವಣೆಗೆ ಒಂದು ವರ್ಷಕ್ಕೂ ಮೀರಿದ ಅವಧಿ ಬಾಕಿಯಿದ್ದರೆ ಯಾವುದೇ ಕ್ಷೇತ್ರವನ್ನು ಜನಪ್ರತಿನಿಧಿಯಿಲ್ಲದೆ ಖಾಲಿ ಬಿಡುವಂತಿಲ್ಲ. ಮುಂದಿನ ಲೋಕಸಭೆ ಚುನಾವಣೆಗೆ ಮುಂದಿನ ವರ್ಷದ ಜೂನ್‌ 3ರವರೆಗೂ ಸಮಯವಿದೆ.

2014ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆ ನೆನಪು2014ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆ ನೆನಪು

ಪ್ರಧಾನಿ ಮೋದಿಯಿಂದ ಅನಂತಕುಮಾರ್ ಅಂತಿಮ ದರ್ಶನ

ಪ್ರಧಾನಿ ಮೋದಿಯಿಂದ ಅನಂತಕುಮಾರ್ ಅಂತಿಮ ದರ್ಶನ

ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಮತ ಕ್ಷೇತ್ರದ ಸ್ಥಾನ ತೆರವಾಗಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆಯುವುದು ಅನುಮಾನ ಎನ್ನುವ ಮಾಹಿತಿ ಲಭ್ಯವಾಗಿದೆ.

ಮುಂದಿನ ಸಾರ್ವತ್ರಿಕ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇದ್ದು, ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗಿದೆ.

ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗೆ ಕರ್ನಾಟಕದ ಐದು ಕ್ಷೇತ್ರಗಳು ಸೇರಿದಂತೆ ದೇಶದ ಹಲವೆಡೆ ಉಪ ಚುನಾವಣೆಗಳನ್ನು ಮಾಡಿ ಮುಗಿಸಿದೆ. ಅಷ್ಟೇ ಅಲ್ಲದೆ ಮಧ್ಯಪ್ರದೇಶ ಸೇರಿದಂತೆ ಈಗಾಗಲೇ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದಾಗಿ ಉಳಿದಿರುವ ಐದು ತಿಂಗಳ ಅವಧಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆಯೋಗ ಆಸಕ್ತಿ ತೋರುತ್ತಿಲ್ಲ ಎನ್ನಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಮಾಜಿ ಸಚಿವ ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆದರು, ಅವರು ನಡೆದುಕೊಳ್ಳುತ್ತಿದ್ದ ರೀತಿ, ಆತ್ಮೀಯತೆ, ಮನೋಭಾವವನ್ನು ಕೊಂಡಾಡಿದರು.

ನವೆಂಬರ್ 12ರಂದು ಅನಂತ ಕುಮಾರ್ ನಿಧನ

ನವೆಂಬರ್ 12ರಂದು ಅನಂತ ಕುಮಾರ್ ನಿಧನ

ನವೆಂಬರ್ 12ರಂದು ಬೆಳಗಿನ ಜಾವ ಮಾಜಿ ಸಚಿವ ಅನಂತ ಕುಮಾರ್ ನಿಧನರಾಗಿದ್ದಾರೆ. ಶ್ವಾಸಕೋಶ ಕ್ಯಾನ್ಸರ್‌ನಿಂ್ ಬಳಲುತ್ತಿದ್ದ ಅವರು ಲಂಡನ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಅನಂತ್ ಕುಮಾರ್ ನಿಧನ : ಕರ್ನಾಟಕ ಬಿಜೆಪಿಗೆ ದೊಡ್ಡ ನಷ್ಟಅನಂತ್ ಕುಮಾರ್ ನಿಧನ : ಕರ್ನಾಟಕ ಬಿಜೆಪಿಗೆ ದೊಡ್ಡ ನಷ್ಟ

English summary
Remain vacant after sad demise of union minister Ananth Kumar, no possibilities of by election for Bangalore south parliament constituency since general election will be held within six months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X