ಹೊರಗುತ್ತಿಗೆ ನೌಕರರ ಖಾಯಂ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು, ಜೂ.13 : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ
ನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಿ ಕೂಗಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಉತ್ತರ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಿಕ್ಕಮಾದು ಅವರ ಪ್ರಶ್ನೆಗೆ ಉತ್ತರಿಸಿದ
ಸಿದ್ದರಾಮಯ್ಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 938 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ಮಾಡಿಕೊಳ್ಳಲು ಅವಕಾಶ ಇಲ್ಲದಿರುವುದರಿಂದ ಹೊರಗುತ್ತಿಗೆ ಆಧಾರದ ನೌಕರರ ಸೇವೆಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಖಾಯಂಗೊಳಿಸಿ ಎಂದು ಹಲವು ಹೋರಾಟಗಳು ನಡೆಸುತ್ತಿವೆ. ಈ ಹೋರಾಟಗಳಿಗೆಲ್ಲ ಖುದ್ದು ಸಿದ್ದರಾಮಯ್ಯ ಅವರು ಇಂದು ವಿಧಾನಸಭೆ ಕಲಾಪದಲ್ಲಿ ಸ್ಪಷ್ಟನೆ ನೀಡಿದರು.












Click it and Unblock the Notifications