ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ- ಆರ್ ಅಶೋಕ್

|
Google Oneindia Kannada News

ಬೆಂಗಳೂರು, ಜುಲೈ 30: ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಜೋರಾಗಿ ಸದ್ದು ಮಾಡಿತ್ತು. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಮಾತು ಕೇಳಿ ಬಂತು. ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಯೂ ಚರ್ಚೆಯಾಗುತ್ತಿದೆ.

Recommended Video

ಏನಿದು ಹೊಸ ಶಿಕ್ಷಣ ರೀತಿ?ಏನಿದು ಹೊಸ ಸಚಿವಾಲಯ ಬದಲಾವಣೆ? | Oneindia Kannada

ಮುಂದಿನ ಸಿಎಂ ರೇಸ್‌ನಲ್ಲಿ ಆರ್ ಅಶೋಕ್ ಸಹ ಇದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೀಗ, 'ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ನಾಯಕರು' ಎಂದು ಕಂದಾಯ ಸಚಿವ ಆರ್ ಅಶೋಕ್ ಸ್ಪಷ್ಟಪಡಿಸಿದ್ದಾರೆ.

'ಯಡಿಯೂರಪ್ಪ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ''ಯಡಿಯೂರಪ್ಪ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ'

'ಸಾಮಾನ್ಯವಾಗಿ ಸರ್ಕಾರ ಒಂದು ವರ್ಷ ಪೂರೈಸಿದಾಗ ಮುಖ್ಯಮಂತ್ರಿ ದೆಹಲಿಗೆ ಹೋಗಿ ಶುಭಾಶಯ ಕೋರುವುದು ಸಂಪ್ರದಾಯ. ಆದರೆ, ಕೊರೊನಾ ಇರುವುದರಿಂದ ಸಿಎಂ ದೆಹಲಿಗೆ ಹೋಗಲು ಸಾಧ್ಯವಾಗಿಲ್ಲ. ನಮ್ಮಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ನಾವು ಯಡಿಯೂರಪ್ಪ ಪರ, ಅವರೇ ನಮ್ಮ ನಾಯಕರು' ಎಂದು ಆರ್ ಅಶೋಕ್ ಹೇಳಿದ್ದಾರೆ.

No Chief Minister Change in Karnataka Said R Ashok

ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಣ ಬಗ್ಗೆ ಮಾತನಾಡಿದ ಆರ್ ಅಶೋಕ್ 'ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಕೊರನಾ ಚಿಕಿತ್ಸೆಗೆ ನಿರಾಕರಿಸಿದರೆ ಅಂತ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 8 ಆಸ್ಪತ್ರೆಗಳಿಗೆ ನೊಟಿಸ್ ಕೊಟ್ಟಿದ್ದೇವೆ. ಅವರ ಒಪಿಡಿ ಬಂದ್ ಮಾಡಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಆಸ್ಪತ್ರೆಗಳನ್ನು ಸಂಪೂರ್ಣ ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

'ವೈದ್ಯರು ಕೊರೊನಾ ವಾರಿಯರ್ಸ್ ಆದ ಮೇಲೆ ನೆಪ ಹೇಳಿ ತಪ್ಪಿಸಿಕೊಳ್ಳುವ ಕೆಲಸ ಮಾಡಬಾರದು. ವೈದ್ಯರು ಮತ್ತು ನರ್ಸ್ ಕಡ್ಡಾಯವಾಗಿ ತಮ್ಮ ಜವಾಬ್ದಾರಿ ನಿಭಾಯಿಸಬೇಕು. ತಪ್ಪಿಸಿಕೊಳ್ಳುವವರು ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ದಕ್ಷಿಣದಲ್ಲಿ ಹೊಸ App ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ಯಾರೇ ರೋಗಿಗಳು ಈ App ಮೂಲಕ ಸಂಪರ್ಕ ಮಾಡಿದರೆ ಅವರಿಗೆ ತಕ್ಷಣ ವೈದ್ಯರು ಸಂಪರ್ಕಿಸಿ ಅಗತ್ಯ ಚಿಕಿತ್ಸೆ ನೀಡುತ್ತಾರೆ'' ಎಂದು ಹೇಳಿದರು.

English summary
BS Yediyurappa is our CM, we are with him, no Chief Minister Change in Karnataka Said Revenue minister R Ashok at bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X