ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ವಿದ್ಯುತ್ ಬಿಲ್ ಕಟ್ಟಲೇಬೇಕು; ವದಂತಿಗಳಿಗೆ ಕಿವಿಗೊಡಬೇಡಿ'

|
Google Oneindia Kannada News

ಬೆಂಗಳೂರು, ಏಪ್ರಿಲ್ 3; ವಿದ್ಯುತ್ ಸರಬರಾಜು ಕಂಪನಿಗಳು ಅಡಚಣೆ ರಹಿತ ವಿದ್ಯುತ್ ಸರಬರಾಜು ಮಾಡಲು ಅನುಕೂಲ ಆಗುವಂತೆ ಗ್ರಾಹಕರು ಆನ್‍ಲೈನ್ ಅಥವಾ ಡಿಜಿಟಲ್ ಪೆಮೇಂಟ್ ವಿಧಾನಗಳ ಮೂಲಕ ವಿದ್ಯುತ್ ಬಿಲ್ಲನ್ನು ಪಾವತಿಸಲು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ವಿನಂತಿಸಿದ್ದಾರೆ.

ಈ‌ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೊನಾ ಹಿನ್ನೆಲೆಯಲ್ಲಿ ಗ್ರಾಹಕರು ಮೂರು ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು ಮುಂದೂಡಲಾಗಿದೆ ಎಂದು ಕೆಲ ಸುಳ್ಳು ಸುದ್ದಿಗಳು ಹರಿದಾಡಿವೆ.

ಆದರೆ, ಬಿಲ್ ಪಾವತಿ ವಿನಾಯಿತಿ ಬಗ್ಗೆ ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರ್ಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು ಯಾವುದೇ ನಿರ್ದೇಶನಗಳನ್ನು ನೀಡಿಲ್ಲ. ಬಿಲ್ ಕಟ್ಟಲೇಬೇಕು ಎಂದು ಅವರು ತಿಳಿಸಿದ್ದಾರೆ.

No Concision For Current Bill: Power Ministry Officials Confirms It

ಏಪ್ರಿಲ್ ತಿಂಗಳ ಮಾಸಿಕ ಮಾಪಕ ಓದುವಿಕೆ ಹಾಗೂ ಬಿಲ್ ವಿತರಣೆಯನ್ನು ಸರಾಸರಿ ಬಿಲ್ ಅಥವಾ ಹಿಂದಿನ ತಿಂಗಳ ಬಿಲ್‍ನ್ನು ನೀಡುವ ಮೂಲಕ ನಿರ್ವಹಿಸಲಾಗುವುದು. ಹಾಲಿ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಬಿಲ್‍ನ್ನು ಇ-ಮೇಲ್/ಎಸ್‍ಎಮ್‍ಎಸ್/ ಪಾಟ್ಸಾಪ್ ಮುಖಾಂತರ ಕಳುಹಿಸಲಾಗುವುದು. ಗ್ರಾಹಕ ಸಹಾಯವಾಣಿ 1912 ಗೆ ಕರೆ ಮಾಡಿ, ಅಕೌಂಟ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ ಬಿಲ್ ವಿವರಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

ಅಲ್ಲದೇ ವಿದ್ಯುತ್ ಸರಬರಾಜು ಕಂಪನಿಯ ಮೊಬೈಲ್ ಆಪ್/ ಜಾಲತಾಣದಲ್ಲಿ ನೋಂದಾಯಿಸಿಕೊಂಡು ಸಹ ಬಿಲ್ ವಿವರಗಳನ್ನು ಪಡೆಯಬಹುದಾಗಿದೆ. ಗ್ರಾಹಕರು ಸಂಬಂಧಪಟ್ಟ ಉಪವಿಭಾಗ ಕಛೇರಿಯನ್ನು ಸಂಪರ್ಕಿಸಿ ಬಿಲ್ ವಿವರಗಳನ್ನು ಪಡೆಯಬಹುದಾಗಿದೆ ಎಂದಿದ್ದಾರೆ.

ಯಾವುದೇ ಗ್ರಾಹಕರು ಬಿಲ್ ಪಾವತಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗದಿದ್ದಲ್ಲಿ, ಅಂತಹ ಗ್ರಾಹಕರು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಉಪವಿಭಾಗಾಧಿಕಾರಿಗಳ ಕಛೇರಿಗೆ ಲಿಖಿತ ಮನವಿ ಸಲ್ಲಿಸಲು ಅವರು ಸೂಚಿಸಿದ್ದಾರೆ.

English summary
No Concision For Current Bill: Power Ministry Officials Confirms It. There fake news Circulating about Current bill concision ahead of Coronavirus outbreak
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X