• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತವಿಲ್ಲ: ಕೆ.ಸಿ. ವೇಣುಗೋಪಾಲ್

|

ಬೆಂಗಳೂರು, ಡಿಸೆಂಬರ್ 26: ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಕಾಂಗ್ರೆಸ್‌ನ ಕರ್ನಾಟಕದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ರಾಮಲಿಂಗಾರೆಡ್ಡಿಯನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ವಿಶ್ವನಾಥ್

ಸಚಿವ ಖಾತೆ ಸಿಗದ ಕಾರಣಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿರುವುದು ಮತ್ತು ಸಂಪುಟದಿಂದ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತೇನೆ ಎಂಬ ಬೆದರಿಕೆ ಹಾಕಿರುವ ಕುರಿತು ಬೆಂಗಳೂರಿನಲ್ಲಿ ಅವರು ಮಾತನಾಡಿದರು.

ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯ ನಾಯಕರು. ಅವರು ಕಾಂಗ್ರೆಸ್ ಪಕ್ಷ ತೊರೆದು ಬೇರೆ ಎಲ್ಲಿಗೂ ಹೋಗುವುದಿಲ್ಲ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಅಸಮಾಧಾನ : ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಪಕ್ಷದ ಯಾವ ಶಾಸಕರೂ ಹೈಕಮಾಂಡ್ ನಿರ್ಧಾರದ ವಿರುದ್ಧ ಅಸಮಾಧಾನ ಹೊಂದಿಲ್ಲ. ಕೆಲವು ಆಕಾಂಕ್ಷಿಗಳಲ್ಲಿ ಅತೃಪ್ತಿ ಇರುವುದು ಸಹಜ. ಎಲ್ಲ ಶಾಸಕರೊಂದಿಗೂ ನಾನು ಮಾತನಾಡಿದ್ದೇನೆ. ಸಂಪುಟ ವಿಸ್ತರಣೆಯ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಅದರಲ್ಲಿ ನಾನು ಭಾಗಿಯಾಗಿಲ್ಲ ಎಂದು ತಿಳಿಸಿದರು.

'ಯಾವುದೇ ಖಾತೆಗೂ ಬದ್ಧ'

ತಮಗೆ ಯಾವ ಖಾತೆ ನೀಡಿದರೂ ಅದನ್ನು ಒಪ್ಪಿಕೊಂಡು ನಿಭಾಯಿಸುವುದಾಗಿ ನೂತನ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ತೊರೆಯುವುದಿಲ್ಲ. ಅವರು ಗೋಕಾಕ್‌ನಲ್ಲಿದ್ದಾರೆ. ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

English summary
Karnataka Congress In-charge KC Venugopal said that, there is no dissident in the party, following the party's senior leader Ramalinga Reddy's unhappiness over not including him in cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X