ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಲ್‌ಬಾಗ್‌ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

|
Google Oneindia Kannada News

ಬೆಂಗಳೂರು, ಜನವರಿ 18: ಲಾಲ್‌ಬಾಗ್‌ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ರದ್ದುಪಡಿಸಿದೆ.

ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ವರ್ಷ ಸಣ್ಣ ಪ್ರಮಾಣದಲ್ಲಿ ಕೊರೊನಾ ಕುರಿತು ಗೃತಿ ನೀಡುವ ಕುರಿತ ಫಲಪುಷ್ಪ ಪ್ರದರ್ಶನ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು.

ಆದರೆ, ರೂಪಾಂತರಿ ಕೊರೊನಾ ಭೀತಿಯಲ್ಲಿ ಜನರಲ್ಲಿ ಕಾಡುತ್ತಿದ್ದು, ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.ಜತೆ ಮೈಸೂರು ಉದ್ಯಾನ ಕಲಾಸಂಘ ಸಹ ಫಲಪುಷ್ಪ ಪ್ರದರ್ಶನ ಆಯೋಜಿಸುವುದು ಬೇಡ ಎಂದು ಹೇಳಿತ್ತು.

No Flower Show At Lalbagh On January 26

ತೋಟಗಾರಿಕೆ ಸಚಿವ ನಾರಾಯಣಗೌಡ ಅವರ ಸಮ್ಮುಖದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿಯೂ ಪ್ರದರ್ಶನ ರದ್ದಾಗಿತ್ತು, ಅಲ್ಲದೆ ಎರಡು ಮೂರು ತಿಂಗಳ ಮೊದಲೇ ಪೂರ್ವ ಸಿದ್ಧತೆಗಳು ನಡೆಯಬೇಕಿತ್ತು.

ಈ ಬಾರಿ ಸಿದ್ಧತೆಗಳನ್ನು ನಡೆಸಲಾಗಿಲ್ಲ.ಹಣವೂ ಇಲ್ಲ ಸರಳವಾಗಿ ಮಾಡಿದರೆ ಜನ ಬರುವುದು ಅನುಮಾನ, ಹೀಗಾಗಿ ಪ್ರದರ್ಶನವನ್ನೇ ರದ್ದುಗೊಳಿಸುವಂತೆ ಮನವಿ ಮಾಡಲಾಗಿತ್ತು ಎಂದು ಮೈಸೂರು ಉದ್ಯಾನ ಕಲಾಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ 102 ಕೇಂದ್ರಗಳಲ್ಲಿ ಇಂದು ಕೊರೊನಾ ಲಸಿಕೆ ಅಭಿಯಾನ ನಡೆಯಲಿದೆ.

ಬಿಬಿಎಂಪಿಯ ವ್ಯಾಪ್ತಿಯಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಾಲ್ಕು ಸಾವಿರ ಆರೋಗ್ಯ ಸಿಬ್ಬಂದಿಗೆ ಸೋಮವಾರ ಕೊರೊನಾ ಲಸಿಕೆ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದಾರೆ.

Recommended Video

ಮಹಾರಾಷ್ಟ್ರದ ಸಾವಿರ ಸಿಎಂಗಳು ಬಂದು ಹೇಳಿದ್ರೂ ಬೆಳಗಾವಿ-ನಿಪ್ಪಾಣಿ ನಮ್ಮದೇ- DCM Savadi | Oneindia Kannada

ನಗರದ 141 ಪ್ರಾಥಮಿಕ ಆರೋಗ್ಯ ಕೇಂದ್ರದ 7,300 ಆರೋಗ್ಯ ಸಿಬ್ಬಂದಿ,106 ಖಾಸಗಿ ಆಸ್ಪತ್ರೆಯ 42,000 ಸಿಬ್ಬಂದಿ ಹಾಗೂ ಒಂಬತ್ತು ವೈದ್ಯಕೀಯ ಕಾಲೇಜುಗಳ 28 ಸಾವಿರ ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

English summary
The Famous Republic day flower show at Lalbagh schedule for January 2021 has been cencelled due to Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X