ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅವಕಾಶ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ಆದೇಶ

|
Google Oneindia Kannada News

ಬೆಂಗಳೂರು, ಆಗಸ್ಟ್ 31: ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ಧಾರ್ಮಿಕ ಆಚರಣೆಯ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟವರಿಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನಡೆ ಉಂಟುಮಾಡಿದಂತಾಗಿದೆ.

ಹಬ್ಬಕ್ಕೆ ಮುನ್ನಾದಿನವೇ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ನಾಳೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ವಕ್ಫ್ ಮಂಡಳಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

No Ganesh Festival At Chamarajpet Idgah Maidan: Supreme Court

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕಳೆದ 200 ವರ್ಷಗಳಿಂದ ಗಣೇಶೋತ್ಸವ ನಡೆದಿಲ್ಲ. ಈಗ ಇದೇ ಜಾಗದಲ್ಲಿ ಗಣೇಶ ಉತ್ಸವ ಮಾಡಬೇಕು ಎನ್ನುವ ಹಠ ಯಾಕೆ?. ಏಕಸದಸ್ಯ ಪೀಠದಲ್ಲಿ ವಿಚಾರಣೆ ಮುಂದುವರೆಯಲಿ. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವುದೇ ಸೂಕ್ತ ಎಂದು ವಕ್ಫ್‌ ಮಂಡಳಿ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.

No Ganesh Festival At Chamarajpet Idgah Maidan: Supreme Court

ಸುದೀರ್ಘ ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು. ರಾಜ್ಯ ಸರ್ಕಾರಕ್ಕೆ ಗಣೇಶೋತ್ಸವಕ್ಕೆ ಅನುಮತಿ ನೀಡದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.

English summary
The Supreme Court Says, No Ganesh Chaturthi celebrations will be held at Bengaluru's Idgah Maidan. For the Hindu festival tomorrow and day after, the state was insisting on giving permissions to set up pandals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X