Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಇಲ್ಲ
Bengaluru Second International Airport: ಕಳೆದ ಎರಡು ವರ್ಷಗಳಿಂದಲೂ ಚರ್ಚೆಯ ಹಂತದಲ್ಲೇ ಇರುವ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ಮಾಡಿ ಒಂದು ತಿಂಗಳೇ ಕಳೆದಿದೆ. ಆದರೆ ಇಲ್ಲಿಯ ವರೆಗೂ ಕೇಂದ್ರ ಸರ್ಕಾರದಿಂದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಹೊಸ ಅಪ್ಡೇಟ್ಸ್ ಬಂದಿಲ್ಲ.
ಬೆಂಗಳೂರಿಗೆ ಈಗ ಇರುವ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿತ್ತು. ಕರ್ನಾಟಕ ಸರ್ಕಾರವು ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸತತ ಮೂರು ಬಾರಿ ಮನವಿಯನ್ನೂ ಸಲ್ಲಿಸಿದೆ. ಆದರೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಯಾವುದೇ ಮಹತ್ವದ ಬೆಳವಣಿಗೆಗಳು ನಡೆದಿಲ್ಲ.

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಜಾಗಗಳನ್ನು ಗುರುತಿಸಲಾಗಿದೆ. ಅದರಲ್ಲಿ ಹಾರೋಹಳ್ಳಿ, ಬಿಡದಿ (ಕನಕಪುರ ರಸ್ತೆ) ಮತ್ತು ನೆಲಮಂಗಲ ಬಳಿಯ ಕುಣಿಗಲ್ ರಸ್ತೆ ಸೇರಿದಂತೆ ಮೂರು-ನಾಲ್ಕು ಸಂಭಾವ್ಯ ಸ್ಥಳಗಳನ್ನು ತಜ್ಞರ ತಂಡ ಈಗಾಗಲೇ ಪರಿಶೀಲನೆ ಮಾಡಿದೆ. ಕೇಂದ್ರ ಸರ್ಕಾರವು ಜಾಗದ ಆಯ್ಕೆಯನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟುಕೊಟ್ಟಿದ್ದು, 5 ತಿಂಗಳಲ್ಲಿ ಅಂತಿಮ ಸ್ಥಳ ಫೈನಲ್ ಆಗುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗಿದೆ. ಆದರೆ, ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿಲ್ಲ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ 4,000 ರಿಂದ 5000 ಎಕರೆ ಭೂಮಿಯ ಅವಶ್ಯಕತೆ ಇದೆ. ಆದರೆ ಕರ್ನಾಟಕ ಸರ್ಕಾರವು ಸ್ಥಳದ ಅಂತಿಮ ಆಯ್ಕೆಯ ಬಗ್ಗೆ ಯಾವುದೇ ಸುಳಿವು ನೀಡಿಲ್ಲ. ಇದು ಪರೋಕ್ಷವಾಗಿ ಈಗಾಗಲೇ ಶಾರ್ಟ್ ಲಿಸ್ಟ್ ಮಾಡಿರುವ ಜಾಗಗಳಲ್ಲಿ ರಿಯಲ್ ಎಸ್ಟೇಟ್‌ಗೆ ಪೆಟ್ಟು ನೀಡಿದೆ ಎಂದು ಹೇಳಲಾಗಿದೆ.
ಕರ್ನಾಟಕ ಸರ್ಕಾರದ ಬಜೆಟ್‌ನಲ್ಲಿ ಪ್ರಸ್ತಾವನೆ
ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಈ ಬಾರಿಯ ಬಜೆಟ್‌ನಲ್ಲೂ ಪ್ರಸ್ತಾಪಿಸಲಾಗಿತ್ತು. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅನುಷ್ಠಾನಕ್ಕೆ ಸಂಬಂಧಿಸಿದಂತೆ 2026-2027ರ ರಾಜ್ಯ ಬಜೆಟ್‌ನಲ್ಲಿ ಈ ಯೋಜನೆಗೆ ಪ್ರಸ್ತಾಪಿಸಲಾಗಿದ್ದು, 2033ರ ವೇಳೆಗೆ ಕಾರ್ಯನಿರ್ವಹಿಸುವ ಗುರಿ ಹೊಂದಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications