Toll fee: ರಾಜ್ಯದ ಈ ಟೋಲ್‌ನಲ್ಲಿ ಟೋಲ್ ಸಂಗ್ರಹಕ್ಕೆ ಬ್ರೇಕ್, ಕಾರಣವೇನು
ಕರ್ನಾಟಕದಲ್ಲಿ ಟೋಲ್ ಸಂಗ್ರಹ ಮಾಡುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ವಿವಿಧ ಭಾಗದಲ್ಲಿ ಟೋಲ್ ಸಂಗ್ರಹ ಹೆಚ್ಚಳವಾಗುತ್ತಿದ್ದು, ಇದನ್ನು ತಡಯಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದರ ನಡುವೆ ರಾಜ್ಯದ ಪ್ರಮುಖ ಟೋಲ್‌ವೊಂದರಲ್ಲಿ ಟೋಲ್ ಸಂಗ್ರಹ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ವಾಹನ ಸವಾರರು ಈ ವಿಷಯ ಕೇಳಿ ಸಂತೋಷಪಟ್ಟಿದ್ದಾರೆ. ರಾಜ್ಯದ ಪ್ರಮುಖ ಟೋಲ್‌ನಲ್ಲಿ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗಿದೆ. ಎಲ್ಲಿ ಹಾಗೂ ಯಾಕೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದಲ್ಲಿ ಟೋಲ್ ಸಂಗ್ರಹಗಳು ಹೆಚ್ಚಾಗುತ್ತಿದ್ದು, ವಾಹನ ಸವಾರರು ಹಾಗೂ ಟೂರ್ಸ್ & ಟ್ರಾವೆಲ್ಸ್ ಅನ್ನೇ ನಂಬಿಕೊಂಡಿರುವವರು ಸಂಕಷ್ಟ ಎದುರಿಸುವಂತೆ ಆಗಿದೆ. ಸಣ್ಣ ಸಣ್ಣ ಜಾಗಕ್ಕೂ ಟೋಲ್‌ಗಳನ್ನು ವಿಧಿಸಲಾಗುತ್ತಿದ್ದು, ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಹಾಸನದ ಆಲೂರು ತಾಲ್ಲೂಕಿನ ಚೌಲಗೆರೆ ಎನ್ನುವ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಲಾಗಿದೆ. ಹೌದು ಇದು ನಿಜಕ್ಕೂ ವಾಹನ ಸವಾರರಿಗೆ ಗುಡ್‌ನ್ಯೂಸ್ ಆಗಿದೆ. ವಾಹನ ಸವಾರರು ಈ ಭಾಗದಲ್ಲಿ ಟೋಲ್ ಸಂಗ್ರಹ ಪ್ರಾರಂಭಿಸಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇಲ್ಲಿ ಟೋಲ್ ಸಂಗ್ರಹ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ.

ಸೋಮವಾರದಿಂದ ಇಲ್ಲಿ ಟೋಲ್ ಸಂಗ್ರಹ ಮಾಡುವುದನ್ನು ಪರಿಚಯಿಸಲಾಗಿತ್ತು. ಆದರೆ, ಟೋಲ್ ಸಂಗ್ರಹವಾಗುತ್ತಿದ್ದಂತೆಯೇ ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಜನ ಹಾಗೂ ವಾಹನ ಸವಾರರು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕಡಿಮೆ ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಕಾಮಗಾರಿ ಪೂರ್ಣವಾಗುವ ಮುನ್ನವೇ ಈ ಭಾಗದಲ್ಲಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಇಲ್ಲಿನ ಸ್ಥಳೀಯರು ಹಾಗೂ ವಾಹನ ಸವಾರರು ಆರೋಪ ಮಾಡಿದ್ದರು. ಅಲ್ಲದೆ ಏಕಾಏಕಿ ಟೋಲ್ ಪ್ರಾರಂಭ ಮಾಡಿ, ಟೋಲ್ ಶುಲ್ಕ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ವಾಹನ ಸವಾರು ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಈ ಭಾಗದಲ್ಲಿ ರಸ್ತೆ ಕಾಮಗಾರಿ ಕಳಪೆಯಾಗಿದೆ. ಇನ್ನು ಇಲ್ಲಿನ ಸಕಲೇಶಪುರದಿಂದ ಮಾರನಹಳ್ಳಿವರೆಗೆ ರಸ್ತೆ ಕಾಮಗಾರಿಯೇ ಮುಗಿದಿಲ್ಲ. ಆದರೆ, ಅದಕ್ಕೂ ಮುಂಚೆಯೇ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ತೀವ್ರ ವಿರೋಧ ವ್ಯಕ್ತವಾಗಿತ್ತು.
ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈ ಭಾಗದಲ್ಲಿ ಟೋಲ್ ಸಂಗ್ರಹ ಶುಲ್ಕ ವಿಧಿಸುವುದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಇನ್ನು ಇಲ್ಲಿ ಟೋಲ್ ಶುಲ್ಕ ಹಾಗೂ ನಿಯಮ ಉಲ್ಲಂಘನೆಯ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ನಿಯಮಾನುಸಾರ ಟೋಲ್ ಕೇಂದ್ರವು ಪ್ರತಿ 60 ಕಿ.ಮೀ. ಅಂತರದಲ್ಲಿಬೇಕು. ಎಂದಿದೆ. ಆದರೆ, ಇಲ್ಲಿ ಶಾಂತಿಗ್ರಾಮ ವ್ಯಾಪ್ತಿಯಲ್ಲಿ ಈಗಾಗಲೇ ಟೋಲ್ ಕೇಂದ್ರವಿದೆ. ಈ ಟೋಲ್ ಕೇಂದ್ರದಿಂದ ಆಲೂರು ತಾಲ್ಲೂಕಿನ ಚೌಲಗೆರೆಯ ನೂತಲ ಟೋಲ್‌ಗೆ ಇರುವ ದೂರವು ಕೇವಲ 30 ಕಿ.ಮೀ ಮಾತ್ರ ನಿಯಮ ಉಲ್ಲಂಘನೆ ಮಾಡಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಲ್ಲಿ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಲಾಗಿದೆ.












Click it and Unblock the Notifications