ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನುಮತಿ ಪಡೆಯದೆ ಫ್ಲೆಕ್ಸ್ ಮುದ್ರಿಸಿದರೆ ಪ್ರಕರಣ

|
Google Oneindia Kannada News

ಬೆಂಗಳೂರು, ಸೆ. 19 : ಬಿಬಿಎಂಪಿ ಅನುಮತಿ ಪಡೆಯದೇ ಫ್ಲೆಕ್ಸ್‌, ಬ್ಯಾನರ್‌ ಮತ್ತು ಹೋರ್ಡಿಂಗ್‌ ಮುದ್ರಿಸಿದರೆ ಕ್ರಿಮಿನಲ್‌ ಪ್ರಕರಣಕ್ಕೆ ಸಿಲುಕಿಕೊಳ್ಳಬೇಕಾಗುತ್ತದೆ. ನಗರದ ಫ್ಲೆಕ್ಸ್‌ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ಅನಧಿಕೃತ ಫ್ಲೆಕ್ಸ್‌ ಕಂಡುಬರದಂತೆ ಎಚ್ಚರಿಕೆ ವಹಿಸಲು ಬಿಬಿಎಂಪಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಗುರುವಾರ ಮೇಯರ್, ಸದಸ್ಯರು ಮತ್ತು ಅಧಿಕಾರಿಗಳ ಸಭೆ ನಡೆಸಿದ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಪಾಲಿಕೆ ಅನುಮತಿ ಪಡೆಯದೆ ಫ್ಲೆಕ್ಸ್ ಮುದ್ರಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇದನ್ನು ಎಲ್ಲರಿಗೂ ತಿಳಿಸಬೇಕು ಎಂದು ಸೂಚಿಸಿದ್ದಾರೆ.(ಮಕ್ಕಳ ರಕ್ಷಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ)

bbmp

ಅಲ್ಲದೇ ನಗರದ ಎರಡು ಸಾವಿರ ಕಿಮೀ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಅನುದಾನ ನೀಡಲಾಗಿದೆ. ಮಳೆಗಾಲ ಮುಗಿಯುವವರೆಗೆ ರಸ್ತೆಗಳ ನಿರ್ವಹಣೆ ಮಾಡುವುದು ಸಂಬಂಧಿಸಿದವರ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಮತ್ತಷ್ಟು ಚುರುಕು ನೀಡಬೇಕು. ನಗರೋತ್ಥಾನ ಯೋಜನೆಯಲ್ಲಿ ಒಂದು ಸಾವಿರ ಕೋಟಿ ರೂ. ಮಂಜೂರಾಗಿದ್ದು ಯೋಜನಾ ವರದಿ ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು.(ಯಡಿಯೂರು ಕೆರೆ, ಪಾರ್ಕ್‌ ಮೇಲೊಂದು ಪಕ್ಷಿ ನೋಟ)

ಮುದ್ರಿಸುವಾಗ ಅನುಮತಿ ಕಡ್ಡಾಯ
ಇನ್ನು ಫ್ಲೆಕ್ಸ್‌, ಬ್ಯಾನರ್‌ ಮತ್ತು ಹೋರ್ಡಿಂಗ್ ಹಾಗೂ ಸಿನಿಮಾ ಪೋಸ್ಟರ್ ಮುದ್ರಿಸುವಾಗ ಪ್ರಕಾಶಕರು ಕಡ್ಡಾಯವಾಗಿ ಬಿಬಿಎಂಪಿಯಿಂದ ಉದ್ದಿಮೆ ಪರವಾನಗಿ ಪಡೆದಿರಬೇಕು. ಇದನ್ನು ಪಾಲಿಸದ ಘಟಕಗಳಿಗೆ ಬೀಗ ಹಾಕಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಎಚ್ಚರಿಕೆ ನೀಡಿದ್ದಾರೆ.

ಗ್ರಾಹಕರದ್ದೂ ಜವಾಬ್ದಾರಿ ಇದೆ
ಯಾವುದೇ ರೀತಿಯ ಫ್ಲೆಕ್ಸ್‌, ಬ್ಯಾನರ್‌ ಮತ್ತು ಹೋರ್ಡಿಂಗ್ ಮುದ್ರಣಕ್ಕೆ ತೆರಳಿದ ಗ್ರಾಹಕರು ಪ್ರಕಾಶಕರು ಅನುಮತಿ ಪಡೆದಿದ್ದಾರೆಯೇ? ಎಂದು ಖಾತ್ರಿಪಡಿಸಿಕೊಳ್ಳುವುದು ಉತ್ತಮ. ಇದು ಮುಂದೆ ಕಾನೂನು ತೊಡಕು ಎದುರಾಗದಂತೆ ತಡೆಯುತ್ತದೆ ಎಂದು ಆಯುಕ್ತರು ಸಲಹೆ ನೀಡಿದ್ದಾರೆ. ಅಲ್ಲದೇ ಬ್ಯಾನರ್‌ ಹಾಕುವವರು ನಿರ್ದಿಷ್ಟ ಶುಲ್ಕ ಪಾವತಿಸುವುದು ಕಡ್ಡಾಯ ಎಂದು ಹೇಳಿದ್ದಾರೆ.

English summary
Bangalore: District in-charge Minister Ramalinga Reddy on Thursday instructed to Bruhat Bangalore Mahanagara Palike (BBMP) make city clean.He conducted officers and councillors meeting. Banner and other hoardings Printers must take a official permission from BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X