ನಟ ದರ್ಶನ್ ಕಾಂಗ್ರೆಸ್ ಸೇರ್ಪಡೆ ಆಗ್ತಾರಾ? ಈ ಬಗ್ಗೆ ಪರಮೇಶ್ವರ್ ಏನಂದ್ರು?
ನಟ ದರ್ಶನ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿಕೆ.
Recommended Video

ಚಾಲೆಂಜಿಗ್ ಸ್ಟಾರ್ ದರ್ಶನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರ ? | Oneindia Kannada
ಬೆಂಗಳೂರು, ಆಗಸ್ಟ್ 31: ನಟ ದರ್ಶನ್ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆಂಬ ಸುದ್ದಿಗಳು ಹರಡಿದ್ದು ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
''ದರ್ಶನ್ ತಾಯಿ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿದ್ದಾರೆ. ಆದರೆ, ಅವರ ಪುತ್ರನನ್ನು ಕರೆತರುವ ವಿಚಾರ ಅವರು ಯಾವತ್ತೂ ನನ್ನ ಬಳಿ ಚರ್ಚಿಸಿಲ್ಲ. ಹಾಗಾಗಿ, ಈ ಬಗ್ಗೆ ನನಗೇನೂ ತಿಳಿದಿಲ್ಲ'' ಎಂದು ಪರಮೇಶ್ವರ್ ತಿಳಿಸಿದರು.

ಮುಂಬರುವ ಚುನಾವಣೆಯ ಸಂದರ್ಭದಲ್ಲಿ ದರ್ಶನ್ ಅವರನ್ನು ಸ್ಟಾರ್ ಪ್ರಚಾರಕನ್ನಾಗಿಯಾದರೂ ಬಳಸಿಕೊಳ್ಳುವಿರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ''ಕಾಂಗ್ರೆಸ್ ಪ್ರಚಾರಕ್ಕಾಗಿ ನಟರನ್ನು ಬಳಸಿಕೊಳ್ಳುವ ಬಗ್ಗೆ ಚರ್ಚೆಯಾಗಿಲ್ಲ. ಇದನ್ನು ಪಕ್ಷದ ಮುಖಂಡರು ನಿರ್ಧರಿಸುತ್ತಾರೆ. ಸದ್ಯಕ್ಕೆ ನಟರನ್ನು ಬಳಸಿಕೊಳ್ಳುವ ಯಾವುದೇ ಪ್ರಸ್ತಾವನೆ ಪಕ್ಷದ ಮುಂದಿಲ್ಲ'' ಎಂದು ಅವರು ತಿಳಿಸಿದರು.












Click it and Unblock the Notifications