ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಹಾಯಕ ಕಂದಾಯ ಇಲಾಖೆಯಲ್ಲಿ ಖಾತಾ ನೋಂದಣಿಗೆ ಅವಕಾಶವಿಲ್ಲ!

|
Google Oneindia Kannada News

ಬೆಂಗಳೂರು, ಏಪ್ರಿಲ್ 20: ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಖಾತಾ ನೋಂದಣಿ ಹಾಗೂ ವರ್ಗಾವಣೆ ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆನ್ ಲೈನ್ ನಲ್ಲಿ ಆಸ್ತಿ ಖಾತಾ ವರ್ಗಾವಣೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿಆನ್ ಲೈನ್ ನಲ್ಲಿ ಆಸ್ತಿ ಖಾತಾ ವರ್ಗಾವಣೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ

ಬಿಬಿಎಂಪಿ ಎಆರ್ಒ ಕಚೇರಿಯಲ್ಲಿ ನಾಗರಿಕರು ಖುದ್ದು ಭೇಟಿ ನೀಡಿ ಖಾತಾ ನೋಂದಣಿ ಹಾಗೂ ವರ್ಗಾವಣೆ ಅರ್ಜಿ ನೀಡಿದರೂ, ಅರ್ಜಿಗಳ ವಿಲೇವಾರಿ ವಿಳಭ ಹಾಗೂ ಪಾರದರ್ಶಕತೆಯಿಂದ ಕೂಡಿಲ್ಲದಿರುವುದು ಕಂಡು ಬಂದಿದೆ. ಹೀಗಾಗಿ ಖಾತಾ ನೋಂದಣಿ ಹಾಗೂ ವರ್ಗಾವೆ ಸೇವೆಗಳನ್ನು ಆನ್‌ಲೈನ್ ಮೂಲಕವೇ ನಿರ್ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಆನ್‌ಲೈನ್ ಖಾತಾ ಸೇವೆಗಳಿಗೆ ಇ-ಆಡಳಿತ ಒಲಾಖೆಯ ವತಿಯಿಂದ ತಂತ್ರಾಂಶವನ್ನು ವಿನ್ಯಾಸಗೊಳಿಸಲಾಗಿದ್ದು, ಈಗಾಗಲೇ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಆ ಹಿನ್ನೆಲೆಯಲ್ಲಿ ಇನ್ನುಮುಂದೆ ಯಾವುದೇ ಕಂದಾಯ ಅಧಿಕಾರಿಗಳು ಸಾರ್ವಜನಿಕರಿಂದ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಲಾಗಿದೆ.

No Khata entry in BBMP ARO offices

ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ಖಾತಾ ನೋಂದಣಿ ಹಾಗೂ ವರ್ಗಾವಣೆ ಸೇವೆಗಳನ್ನು ಒದಗಿಸಲು ಇ-ಆಡಳಿತ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಹೀಗಾಗಿ ಇನ್ನುಮುಂದೆ ಸಹಾಯಕ ಕಂದಾಯ ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

English summary
Since the department of e-administration has developed software for property holding Khata entry and transfer, the government has cancelled authority of Khata entry and transfer in assistant revenue officer offices under BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X