ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ ಹಗಲಲ್ಲೂ ವಿದ್ಯುತ್

ಬೆಂಗಳೂರು, ಮಾರ್ಚ್ 29: ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಅಭಾವ ಇರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್
ಭರವಸೆ ನೀಡಿದ್ದಾರೆ.

ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಅಭಾವ ಕಾಡುವುದಿಲ್ಲ, ಅಧಿಕೃತ ಅಥವಾ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ಕೃಷಿ ಪಂಪ್ ಸೆಟ್ ಗಳಿಗೂ ಸಮರ್ಪಕ ವಿದ್ಯುತ್ ಪೂರೈಕೆಯಾಗಲಿದೆ ಎಂದು ಹೇಳಿದ್ದಾರೆ.

ಪರೀಕ್ಷಾ ಸಮಯವಾದ ಕಾರಣ ಲೋಡ್ ಇರುವುದಿಲ್ಲ, ಬೇಸಿಗೆಯಲ್ಲಿ ವಿದ್ಯುತ್ ಅಡಚಣೆ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಕುಡಿಯುವ ನೀಡು ಹಾಗೂ ಕೃಷಿ ಪಂಪ್ ಸೆಟ್ ಗಳಿಗೆ ಗುಣಮಟ್ಟದ ವಿದ್ಯುತ್ ನೀಡಲಾಗುವುದು. ರೈತರಿಗೆ ಹಗಲು ಹೊತ್ತು ಹೆಚ್ಚು ಸಮಯ ವಿದ್ಯುತ್ ಪೂರೈಸುವಂತೆ ಹಾಗೂ ಸ್ಥಳೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

No load shedding in this summer

ಮಂಗಳವಾರ ರಾತ್ರಿ ದಾಖಲೆ ಮಟ್ಟದಲ್ಲಿ 10,777 ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯನ್ನು ಪೂರೈಸಲಾಗಿದೆ. ಇನ್ನೂ ಒಂದು ಸಾವಿರ ಮೆಗಾವ್ಯಾಟ್ ಬೇಡಿಕೆ ಸೃಷ್ಟಿಯಾದರೂ ನಿಭಾಯಿಸುವ ಸಾಮರ್ಥ್ಯ ಇಲಾಖೆಗಿದೆ. ವಿದ್ಯುತ್ ಉತ್ಪಾದನೆ ಸಾಮರ್ಥ್ಯ 10,586 ಮೆಗಾವ್ಯಾಟ್ ಗೆ ಹೆಚ್ಚಿದೆ. ಹೀಗಾಗಿ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+