ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತಷ್ಟು ಜಿಲ್ಲೆಗಳಿಗೆ ನೈಟ್ ಕರ್ಫ್ಯೂ ವಿಸ್ತರಣೆ ಸಾಧ್ಯತೆ; ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ರಾಜ್ಯದಲ್ಲಿ ಲಾಕ್‌ಡೌನ್ ಹೇರುವ ಬಗ್ಗೆ ಸದ್ಯಕ್ಕೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದು, ಕೊರೊನಾ ನಿಯಂತ್ರಣಕ್ಕೆ ಇತರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Recommended Video

ಲಾಕ್‌ಡೌನ್‌ ಬಗ್ಗೆ ಚರ್ಚೆ ಇಲ್ಲ, ಮತ್ತಷ್ಟು ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ ವಿಸ್ತರಣೆಗೆ ಚಿಂತನೆ- ಸಿಎಂ ಬಿಎಸ್‌ವೈ | Oneindia Kannada

ಬುಧವಾರ ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಸರ್ವಪಕ್ಷಗಳ ಸಭೆ ನಡೆಸಲಾಗುವುದು. ಎಲ್ಲಾ ಪಕ್ಷಗಳ ಜೊತೆ ಚರ್ಚೆ ನಡೆಸಿ ನಂತರ ನಿರ್ಣಯ ಕೈಗೊಳ್ಳಲಾಗುವುದು. ಅವಶ್ಯಕತೆ ಎನಿಸಿದರೆ ನಿಷೇಧಾಜ್ಞೆಯನ್ನು ಮುಂದುವರೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 'ಸಂಪೂರ್ಣ ಲಾಕ್ ಡೌನ್' ಸಾಧ್ಯತೆ ತೀರಾ ಕಮ್ಮಿ: ಕಾರಣಗಳು ಐದುಬೆಂಗಳೂರಿನಲ್ಲಿ 'ಸಂಪೂರ್ಣ ಲಾಕ್ ಡೌನ್' ಸಾಧ್ಯತೆ ತೀರಾ ಕಮ್ಮಿ: ಕಾರಣಗಳು ಐದು

ಈ ನಡುವೆ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಏರಿಕೆಯಾಗುತ್ತಿರುವ ಕಾರಣ ಇನ್ನೊಂದೆರಡು ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ವಿಧಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಏಪ್ರಿಲ್ 20ರವರೆಗೂ ಬೆಂಗಳೂರು ಒಳಗೊಂಡಂತೆ ಏಳು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಹಾಗೂ ನೈಟ್ ಕರ್ಫ್ಯೂ ವಿಧಿಸಲಾಗಿದೆ.

No Lockdown But Can Extend Night Curfew Says Yediyurappa

ಇದೇ ಏಪ್ರಿಲ್ 18ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಅಂದು ಕೊರೊನಾ ನಿಯಮಾವಳಿಗಳ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಆದರೆ ಲಾಕ್‌ಡೌನ್ ಕುರಿತು ರಾಜ್ಯದಲ್ಲಿ ಊಹಾಪೋಹದ ಸುದ್ದಿ ಹರಿದಾಡುತ್ತಿದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಲಾಕ್‌ಡೌನ್, ವೀಕೆಂಡ್ ಲಾಕ್‌ಡೌನ್ ಕುರಿತು ಯಾವುದೇ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.

English summary
There is no lockdown but we can extend night curfew says BS Yediyurappa,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X