3 ದಿನ ನಮ್ಮ ಮೆಟ್ರೋ ಸಂಚಾರ ಭಾಗಶಃ ರದ್ದು

ಬೆಂಗಳೂರು, ಜುಲೈ 31 : ಬೆಂಗಳೂರಿನಲ್ಲಿ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರ ಮೂರು ದಿನಗಳ ಕಾಲ ಭಾಗಶಃ ರದ್ದಾಗಲಿದೆ. ಹಸಿರು ಮಾರ್ಗದ ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೇಳಿದೆ.

ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿ ಆಗಸ್ಟ್ 3 ಮತ್ತು 4ರಂದು ನಮ್ಮ ಮೆಟ್ರೋ ರೈಲು ಸಂಚಾರ ಭಾಗಶಃ ರದ್ದಾಗಲಿದೆ. ನಿರ್ವಹಣಾ ಕಾರ್ಯವನ್ನು ಕೈಗೊಳ್ಳುವ ಕಾರಣ ಮೆಟ್ರೋ ರೈಲಿನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಆಗಸ್ಟ್ 3ರ ರಾತ್ರಿ 9.30ರಿಂದ ಆಗಸ್ಟ್ 4ರ ಬೆಳಗ್ಗೆ 11ಗಂಟೆಯ ತನಕ ಮೆಟ್ರೋ ರೈಲು ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ಹೇಳಿದೆ. ಎಂ. ಜಿ. ರಸ್ತೆ-ಮೈಸೂರು ರಸ್ತೆ ನಡುವೆ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

No Metro Service on August 3 And 4 Between Mg Road Byappanahalli

ಆಗಸ್ಟ್ 3ರಂದು ದಿನದ ಕೊನೆಯ ರೈಲು ಬೈಯಪ್ಪನಹಳ್ಳಿ ನಿಲ್ದಾಣದಿಂದ ರಾತ್ರಿ 9.30ಕ್ಕೆ ಹಾಗೂ ಮೈಸೂರು ರಸ್ತೆ ನಿಲ್ದಾಣದಿಂದ ರಾತ್ರಿ 9ಕ್ಕೆ ಹೊರಡಲಿದೆ.

ನೇರಳೆ ಮಾರ್ಗದಲ್ಲಿ ಎಂ.ಜಿ.ರಸ್ತೆಯಿಂದ ಮೈಸೂರು ರಸ್ತೆ ನಿಲ್ದಾಣದ ತನಕ ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ. ಅದೇ ರೀತಿ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+