Breaking; ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ
ಬೆಂಗಳೂರು, ಮಾರ್ಚ್ 25; ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಕೆಲವು ಬದಲಾವಣೆಯಾಗಿದೆ. ಮೆಟ್ರೋ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
Recommended Video
ಬೆಂಗಳೂರು ಮೆಟ್ರೋ ರೈಲು ನಿಗಮ ಶುಕ್ರವಾರ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಮಾರ್ಚ್ 26ರ ಶನಿವಾರ ರಾತ್ರಿ 9.30ರಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ಸಿವಿಲ್ ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗುತ್ತದೆ.
ಈ ಕಾಮಗಾರಿಯ ಹಿನ್ನಲೆಯಲ್ಲಿ ನೇರಳೆ ಮಾರ್ಗದಲ್ಲಿ ಎಂ. ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ನಿಲ್ದಾಣದ ತನಕ ವಾಣಿಜ್ಯ ಸೇವೆಯನ್ನು ಮಾರ್ಚ್ 26ರಂದು ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ನಮ್ಮ ಮೆಟ್ರೋ ರೈಲು ಸೇವೆಯು ಎಂ. ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.
ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 9 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.30ಕ್ಕೆ ರೈಲು ಹೊರಡಲಿದೆ.
ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನರ್ ಆರಂಭಿಸಲಾಗುತ್ತದೆ.
ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮಾರ್ಚ್ 26ರ ಶನಿವಾರ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ವೇಳಾಪಟ್ಟಿಯ ಪ್ರಕಾರ ರೈಲು ಸೇವೆ ಇರುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.












Click it and Unblock the Notifications