ಒಂದು ವಾರ ಮೆಜೆಸ್ಟಿಕ್ ನಾಯಂಡಹಳ್ಳಿ ನಡುವೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಮಾರ್ಚ್ 17: ಒಂದು ವಾರಗಳ ಕಾಲ ಮೆಜೆಸ್ಟಿಕ್, ನಾಯಂಡಹಳ್ಳಿ ನಡುವೆ ನಮ್ಮ ಮೆಟ್ರೋ ಸಂಚಾರವಿಲ್ಲ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಸಿಗ್ನಿಲಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುತ್ತಿರುವ ಕಾರಣ ಮಾ.21ರಿಂದ 28ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಹಾಗೆಯೇ ಮಾರ್ಚ್ 21 ರಿಂದ 28ರವರೆಗೆ ಮೆಜೆಸ್ಟಿಕ್, ನಾಯಂಡಹಳ್ಳಿವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಮಾರ್ಚ್ 29ರಂದು ಎಂದಿನಂತೆ ಮೆಟ್ರೋ ಕಾರ್ಯ ನಿರ್ವಹಿಸಲಿದೆ, ಈ ಒಂದು ವಾರ ಮೆಜೆಸ್ಟಿಕ್‌ನಿಂದ ಬೈಯಪ್ಪನಹಳ್ಳಿವರೆಗೆ ನೇರಳೆ ಮಾರ್ಗ ಹಾಗೂ ಹಸಿರು ಮಾರ್ಗದಲ್ಲಿ ಮೆಟ್ರೋ ಎಂದಿನಂತೆ ಸಂಚರಿಸಲಿದೆ. ಈ ಕುರಿತು ಬಿಎಂಆರ್‌ಸಿಎಲ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

No Metro Train Service From Majestic To Nayanadahalli For 8 Days

ಮೈಸೂರು ರಸ್ತೆಯ 7 ಕಿ. ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಪ್ರಾಯೋಗಿಕ ಸಂಚಾರ ಪೂರ್ಣಗೊಂಡು ಜೂನ್‌ನಲ್ಲಿ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

ಬಿಎಂಆರ್‌ಸಿಎಲ್ ಮಂಗಳವಾರದಿಂದ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ನಮ್ಮ ಮೆಟ್ರೋ ಯೋಜನೆಯ 72 ಕಿ. ಮೀ. ಮಾರ್ಗದ ವಿಸ್ತರಿತ ಮಾರ್ಗವಿದು. 2018-19ರಲ್ಲಿಯೇ ಈ ಮಾರ್ಗ ಸಂಚಾರಕ್ಕೆ ಮುಕ್ತವಾಗಬೇಕಿತ್ತು.

ಒಟ್ಟು ಎಂಟು ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿದ್ದು, ಈಗ ರೈಲು ಮೈಸೂರು ರಸ್ತೆ (ನಾಯಂಡಹಳ್ಳಿ) ಇಂದ ಹೊರಟು ಕೆಂಗೇರಿ ಬಸ್ ನಿಲ್ದಾಣದ ತನಕ ಸಂಚಾರ ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+