ಸರ್ಕಾರ, ಕಾರ್ಮಿಕರ ಮಧ್ಯದ ಬಿಕ್ಕಟ್ಟು: ಮಕ್ಕಳಿಗೆ ಉಪವಾಸ

ಬೆಂಗಳೂರು, ಫೆಬ್ರವರಿ 08 : ಗಂಡ ಹೆಂಡತಿ ಜಗಳದಲ್ಲಿ ಕೂಡು ಬಡವಾಯಿತು ಎಂಬಂತೆ ಸರ್ಕಾರ ಹಾಗೂ ಬಿಸಿಯೂಟ ಕಾರ್ಮಿಕರ ನಡುವಿನ ಬಿಕ್ಕಟ್ಟಿನಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳು ಗುರುವಾರದಿಂದ ಮಧ್ಯಾಹ್ನ ಬಿಸಿಯೂಟದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ.

ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಸಂಘ ಕಳೆದ ಎರಡು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಜತೆಗೆ ಗುರುವಾರ ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 10 ಸಾವಿರಕ್ಕೂ ಹೆಚ್ಚು ಬಿಸಿಯೂಟ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತಗೊಳ್ಳಲಿದೆ.

ರಾಜ್ಯದ ಬೀದರ್, ಕಲಬುರಗಿ, ಮೈಸೂರು, ಬೆಳಗಾವಿ, ಬಾಗಲಕೋಟೆ, ಗದಗ, ಮೈಸೂರು, ಚಾಮರಾಜನಗರ, ಬಳ್ಳಾರಿ, ತುನಕೂರು, ಕೊಡಗು, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಹೊಳಲ್ಕೆರೆ, ಹಿರಿಯೂರು ತಾಲೂಕುಗಳ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಖಾಸಗಿ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಬಂದ್ ಆಗಲಿದೆ.

No mid day meals in schools from today

ಗುರುವಾರದ ಗಡುವು: ಎಐಟಿಯುಸಿ ಸಂಯೋಜಿತ ಸಂಘದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಮುಂದುವರೆದಿದ್ದು, ಗುರುವಾರ ಸಂಜೆಯ ಒಳಗೆ ಬೇಡಿಕೆ ಈಡೇರಿಸಿದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ ಬೇಡಿಕೆ ಈಡೇರಿಸುವ ಬಗ್ಗೆ ಮಾತುಕತೆ ನಡೆಸಲು ಇದುವರೆಗೂ ಸಚಿವರಾಗಲಿ ಅಥವಾ ಅಧಿಕಾರಿಗಳಾಗಲಿ ಇತ್ತ ಸುಳಿದಿಲ್ಲ. ಹಾಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಸಂಘದ ರಾಜ್ಯಾಧ್ಯಕ್ಷೆ ಕೆ.ಎಸ್. ವರಲಕ್ಷ್ಮೀ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+