ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಲ್ಲಿ ಒಂದೇ ಒಂದು ಲಸಿಕೆ ಮಿಶ್ರಣ ಪ್ರಕರಣಗಳಿಲ್ಲ: ಡಿಸಿಎಂ

|
Google Oneindia Kannada News

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಣೆ ವೇಳೆ ಎರಡು ಕಂಪನಿಯ ಲಸಿಕೆಗಳು ಮಿಶ್ರಣ ಆಗಿರುವ ಕುರಿತು ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಜನರಿಗೆ ಒಂದೇ ಪ್ರಮಾಣದ ಕೊವಿಡ್-19 ಲಸಿಕೆಗಳನ್ನು ನೀಡಲಾಗುತ್ತದೆ. ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮದೇ ಶೈಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡು ವಿಭಿನ್ನ ಲಸಿಕೆಗಳ ಡೋಸ್ ಅನ್ನು ಒಬ್ಬರಿಗೆ ನೀಡಿರುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಲಸಿಕೆಗಳ ಮಿಶ್ರಣ ಮಾಡಿ ನೀಡುವುದು ಕಾನೂನುಬದ್ಧವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

ಜೂನ್ 2ನೇ ವಾರದಿಂದ ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ ಲಸಿಕೆಜೂನ್ 2ನೇ ವಾರದಿಂದ ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ ಲಸಿಕೆ

ಕರ್ನಾಟಕದಲ್ಲಿ ಸದ್ಯಕ್ಕೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

 No mixing of Coronavirus Vaccines In The Karnataka, People Are Getting same dose of vaccines: DCM

ಕರ್ನಾಟಕದಲ್ಲಿ ಲಸಿಕೆ ಪಡೆದವರ ಸಂಖ್ಯೆ:

Recommended Video

ಕೊರೊನಾದಿಂದ ಮೃತಪಟ್ಟ ವ್ಯಕ್ತಿಯಿದ್ದ ಆಂಬುಲೆನ್ಸ್ ಚಾಲನೆ ಮಾಡಿದ Renukacharya | Oneindia Kannada

ಕರ್ನಾಟಕದಲ್ಲಿ ಈವರೆಗೂ 7,13,480 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,68,437 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 5,83,603 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,05,637 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 82,28,534 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 19,91,063 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಇದುವರೆಗೂ 1,27,54,056 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

English summary
No mixing of Coronavirus Vaccines In The Karnataka, People Are Getting same dose of vaccines: DCM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X